
ಕಲಬುರಗಿ ;ಮಾ.23: ನ್ಯಾಯಮೂರ್ತಿ ನಾಗಮೋಹನ್‍ದಾಸ್ ರವರ ಅಧ್ಯಕ್ಷತೆಯಲ್ಲಿ ಒಳಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ನೇಮಕ ಮಾಡಿ ಸಮೀಕ್ಷೆ ನಡೆಸಿ ವರದಿಯನ್ನು ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿರುವುದರಿಂದ ವರದಿ ತಿರಸ್ಕಾರ ಮಾಡಬೇಕೆಂದು ಅಖಿಲ ಕರ್ನಾಟಕ ದಲಿತ ಸೇನೆಯ ರಾಜ್ಯಾಧ್ಯಕ್ಷ ದತ್ತಾತ್ರೇಯ ಕುಡಕಿ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಭಾರತದ ಸರ್ವೋಚ ನ್ಯಾಯಾಲಯವು ದಿ. 01.08.2024 ರಂದು ಒಳಮೀಸಲಾತಿಯನ್ನು ನೀಡಲು ಆಯಾ ರಾಜ್ಯಗಳಿಗೆ ಅಧಿಕಾರವಿದೆ ಎಂದು ತೀರ್ಪು ನೀಡಿದ್ದು, ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲಾ ಉಪ ಜಾತಿಗಳಿಗೂ ಸೂಕ್ತ ಪ್ರಾತಿನಿಧ್ಯ ಸಿಗದ ಬಗ್ಗೆ ಖಚಿತವಾದ ಅಂಕಿಅಂಶಗಳ ವರದಿ ಆಧಾರದ ಮೇಲೆ ಹಾಗೂ ಅಗತ್ಯವಾದ ಪೂರ್ಣ ಅಂಕಿ ಅಂಶಗಳನ್ನು ಪಡೆದು ಒಳಮೀಸಲಾತಿ ನೀಡಬಹುದೆಂದು ಸೂಚನೆ ನೀಡಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಶೇಕಡ 17+7ರ ಮೀಸಲಾತಿ ಪ್ರಮಾಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಸಾಮಾನ್ಯ ವರ್ಗದವರು ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕೆಂದು ಹೋರಾಟ ರೂಪಿಸಿದ ಹಿನ್ನೆಲೆಯಲ್ಲಿ ದಿನಾಂಕ: 27.02.2026ರಂದು ಶೇಕಡ 15+3ರ ಪ್ರಮಾಣದಲ್ಲಿ ಒಳಮೀಸಲಾತಿ ರಹಿತ” ನೇಮಕ ಮಾಡಲು ಆದೇಶ ಹೊರಡಿಸಿ ಗೆಜೆಟ್‍ನಲ್ಲಿ ಪಕಟಿಸಿರುತ್ತದೆ. ಆದರೆ, 101 ಜಾತಿಗಳಲ್ಲಿ ಒಂದು ಸಮುದಾಯವು ಶೇಕಡ 15+3 ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸಬೇಕೆಂದು ಹೋರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ದಿ. 27 ರಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯನ್ನು ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ ಶೇಕಡ 15+3ರ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸಬಾರದೆಂದು ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ.
ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟವು ಸರ್ಕಾರಕ್ಕೆ ಈ ಮೂಲಕ ಸ್ಪಷ್ಟವಾಗಿ ಎಚ್ಚರಿಸುವ ಈ ಹೋರಾಟಕ್ಕೆ 25.03.2026ರಂದು ಎಂಬುದು ರಹಿತ ಹಳೆ ಮೀಸಲಾತಿಯ ಜಾರಿಗಾಗಿ ಒತ್ತಾಯಿಸಿ
ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಅಖಿಲ ಕರ್ನಾಟಕ ದಲಿತ ಸೇನೆಯು ಬೆಂಬಲ ವ್ಯಕ್ತಪಡಿಸಿ ಸಂಘಟನೆಯ ಸುಮಾರು 500 ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಗಹಿಸಲಿದ್ದರೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.




























