
ಕಲಬುರಗಿ,ಜು.4-ಜಿಲ್ಲೆಯಲ್ಲಿ ಈ ವರ್ಷ ಸಕಾಲಕ್ಕೆ ವಾಡಿಕೆಯಂತೆ ಇಲ್ಲಿಯವರೆಗೆ ಮಳೆ ಬಾರದೇ ಇರುವುದರಿಂದ ಮುಂಗಾರು ಬಿತ್ತನೆ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಬರಗಾಲ ಜಿಲ್ಲೆಯೆಂದು ಘೋಷಿಸಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೃಷಿ ಚಟುವಟಿಕೆ ಆರಂಭಿಸುವಂತೆ ಜಿಲ್ಲಾ ಕೃಷಿಕ ಸಮಾಜದ ಡಾ.ಸಿದ್ರಾಮಪ್ಪ ಪಾಟೀಲ ಧಂಗಾಪೂರ ಒತ್ತಾಯಿಸಿದ್ದಾರೆ.
ಈ ಸಂಬಂಧ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ ಪಾಂಡೆ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಲಿಂಗಯ್ಯ ಹಿರೇಮಠ, ಪ್ರಧಾನ ಕಾರ್ಯದರ್ಶಿ ನಾಗರೆಡ್ಡಿ ಗೋಪಸೇನ್, ಚಿತ್ತರಂಜನ್ ಪಾಟೀಲ, ಚಿತ್ರಶೇಖರ ಪರಶಿವಪ್ಪಗೋಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


























