ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿಕೆಗೆ ಕಲಬುರಗಿ ಜಿಲ್ಲಾ ಹಡಪದ ಸಮುದಾಯ ತೀವ್ರ ಖಂಡನೆ

ಕಲಬುರ್ಗಿ , ಫೆ ೦೪: ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಕುರಿತು ಮಾಧ್ಯಮ ವರದಿಗಾರರು ಸಂದರ್ಶನ ಮಾಡಿ ಪ್ರಶ್ನೆ ಕೇಳಿದಾಗ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುವ ಬರದಲ್ಲಿ (ಹಜಾಮ್) ಎಂಬ ನಿಷೇಧ ಪದವನ್ನು ಬಳಸಿ ಜಾತಿ ನಿಂದನೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್. ಅವರು ಧಾರವಾಡ ಜಿಲ್ಲೆಯ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರವನ್ನು ಶಾಸಕರು ಮತ್ತು ಕಾರ್ಮಿಕ ಸಚಿವರು ಅವರು ನೀಡಿರುವ ಈ ಹೇಳಿಕೆಯನ್ನು ಹಡಪದ ಅಪ್ಪಣ್ಣ (ಕ್ಷೌರಿಕ ) ಸಮಾಜ ಹಾಗೂ ಇತರ ಹಿಂದುಳಿದ ಸಣ್ಣ ಸಣ್ಣ (ಒಬಿಸಿ ) ಯ ಸಮುದಾಯಗಳು ಮತ್ತು ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಚಿವರು ತಕ್ಷಣ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ