Home ಜಿಲ್ಲೆ ಕಲಬುರಗಿ ಕಾಳಗಿ: ನೀರಿನ ಸಮಸ್ಯೆ ನಿವಾರಣೆಗೆ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ

ಕಾಳಗಿ: ನೀರಿನ ಸಮಸ್ಯೆ ನಿವಾರಣೆಗೆ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ

ಕಲಬುರಗಿ,ಏ.29-ಜಿಲ್ಲೆಯ ಕಾಳಗಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಪ್ರಸ್ತುತ ನೀರಿನ ಕೊರತೆ, ನಿರ್ವಹಣೆಗೆ ಕುರಿತು ಪಿಡಿಒಗಳ ಸಭೆ ಜರುಗಿಸಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ತಾಲ್ಲೂಕಿನಲ್ಲಿ ಉಂಟಾಗಿರುವ ನೀರಿನ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕುರಿತು ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.
ನೀರಿನ ಕೊರತೆ ಸಹಾಯವಾಣಿ ಮಾಡಲಾಗಿದ್ದು, ನೀರಿನ ಸಮಸ್ಯೆಗಳ ಕುರಿತು ಸಾರ್ವಜನಿಕರು ಸಂಪರ್ಕಿಸಲು ಮೊಬೈಲ್ ಸಂಖ್ಯೆ – 9945459708 ಸಂಖ್ಯೆಯನ್ನು ಬಳಸುವಂತೆ ತಿಳಿಸಲಾಗಿದೆ, ಈ ಸಂಖ್ಯೆಯನ್ನು ವ್ಯಾಪಕವಾಗಿ ಜನರಿಗೆ ತಿಳಿಸಲು ಪಿಡಿಒಗಳಿಗೆ ಸೂಚಿಸಲಾಗಿದೆ. ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್‍ಗಳ ನಿಯಮಿತ ಸ್ವಚ್ಛತೆ ಹಾಗೂ ಕ್ಲೋರಿನೇಶನ್ ಕಾರ್ಯವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸೂಚಿಸಲಾಗಿದೆ. ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಗ್ರಾಮ ಮಟ್ಟದಲ್ಲಿ ಎಫ್‍ಟಿಕೆ ಮೂಲಕ ನಿರಂತರ ಪರೀಕ್ಷೆಗಳನ್ನು ನಡೆಸುವಂತೆ ನಿರ್ದೇಶಿಸಲಾಗಿದೆ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಬೋರವೆಲ್ ಮೋಟಾರಗಳನ್ನು ಸ್ಪೇರ್ ಇಟ್ಟುಕೊಳ್ಳಲು ಸೂಚಿಸಲಾಯಿತು.
ತೀವ್ರ ನೀರಿನ ಕೊರತೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಖಾಸಗಿ ಬೋರ್‍ವೆಲ್ ಗಳೊಂದಿಗೆ ಓಡಂಬಡಿಕೆ ಮಾಡಿಕೊಂಡು ಬಳಸುವ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಹಿಂದೆ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಮೇಲೆ ವಿಶೇಷ ನಿಗಾ ವಹಿಸಿ, ಯಾವುದೇ ಸಮಸ್ಯೆ ಉಂಟಾದಲ್ಲಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ Pಆಔಗಳಿಗೆ ನಿರ್ದೇಶಿಸಲಾಗಿದೆ. ಸಭೆಯಲ್ಲಿ ಸಿಇಒ ಅವರು ನೀರಿನ ಕೊರತೆ ನಿರ್ವಹಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ತಿಳಿಸಿ, ಎಲ್ಲಾ Pಆಔಗಳು ಕ್ಷೇತ್ರ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.
ಸಾರ್ವಜನಿಕರಿಗೆ ಮನವಿ: ನೀರನ್ನು ಮಿತವಾಗಿ ಬಳಸುವಂತೆ ಹಾಗೂ ನೀರಿನ ಸಂರಕ್ಷಣೆಗೆ ಸಹಕರಿಸುವಂತೆ ಎಲ್ಲ ನಾಗರಿಕರಲ್ಲಿ ಮನವಿ ಮಾಡಲಾಗಿದೆ. ಇದಕ್ಕೂ ಮೊದಲು ಪಸ್ತಪುರ ತಾಂಡಾ, ಗಡಿಕೆಶ್ವರ ಹಾಗು ಮುಗುಟಾ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ಜಲಮುಲಗಳನ್ನು ವೀಕ್ಷಣೆ ಮಾಡಿದರು.
ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಇಒ ಡಾ.ಬಸಲಿಂಗಪ್ಪ ಡಿಗ್ಗಿ, ತಾಲ್ಲೂಕ ಪಂಚಾಯತಿ ಅಧಿಕಾರಿ ಉಮೇಶ್ ರಾಠೋಡ್ ಮತ್ತು ಪಿಡಿಓಗಳು ಉಪಸ್ಥಿತರಿದ್ದರು.