ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಕಲಬುರಗಿ:ಸೆ.18:ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ಮಹಾತ್ಮರನ್ನು ಮರೆಯಬಾರದು. ಸರ್ದಾರ್ ಪಟೇಲ್ ಅವರು ಈ ಭಾಗವನ್ನು ಇಂದು ಸ್ವತಂತ್ರಗೊಳಿಸಿದ್ದಾರೆ. ಅವರಿಗೆ ನಾವು ಚಿರಋಣಿಯಾಗಿರಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪೆÇ್ರ. ಶಶಿಕಾಂತ್ ಎಸ್. ಉಡಿಕೇರಿ ಅವರು ಮಾತನಾಡುತ್ತ, ನಾನು ಮೂಲತಃ ಮುಂಬೈ ಕರ್ನಾಟಕದವನು. ಬಳ್ಳಾರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದೇನೆ. ಈಗ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ನನಗೆ ಹೆಮ್ಮೆ ಇದೆ. ಈ ಕಲ್ಯಾಣ ಕರ್ನಾಟಕವನ್ನು ತುಂಬಾ ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು, ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಬಿ. ಆರ್. ಅಂಬೇಡ್ಕರ್ ಪದವಿ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಪೆÇ್ರ. ಬಸವರಾಜ್ ಕುಮನೂರ್ ಅವರು ಮಾತನಾಡುತ್ತಾ, ಹೈದರಾಬಾದ್ ಕರ್ನಾಟಕ ವಿಮೋಚನೆ ಗೊಳಿಸಿದವರು ಸರ್ದಾರ್ ಪಟೇಲರು. ಅವರು ನಮ್ಮ ಪಾಲಿಗೆ ಮಹಾನಾಯಕರು. ಆ ಸಂದರ್ಭದಲ್ಲಿ ನಮ್ಮ ಕಲ್ಯಾಣ ಕರ್ನಾಟಕದ ಅನೇಕ ಮಹನೀಯರು ಹೋರಾಡಿದ್ದಾರೆ ಬಾಬಾ ಸಾಹೇಬರ ಕನಸು ನನಸು ಮಾಡಿದ್ದಾರೆ. ಹೈದರಾಬಾದ್ ಕರ್ನಾಟಕದ ನಿಜಾಮ ಈ ಪ್ರಾಂತ್ಯವನ್ನು ಬಿಟ್ಟು ಕೊಟ್ಟ ಮೇಲೆ ಆತನಿಗೆ ದೇಶದ ಮೇಲೆ ಭಕ್ತಿ ಬಂತು. ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ 5 ಟನ್ ಬಂಗಾರವನ್ನು ದೇಶಕ್ಕಾಗಿ ನೀಡಿ ದೇಶಭಕ್ತಿ ಮೆರೆದನು ಎಂದು ಹೇಳಿದರು. ವೇದಿಕೆಯಲ್ಲಿ ಕುಲಸಚಿವರಾದ ಪೆÇ್ರ. ರಮೇಶ್ ಲಂಡನಕರ್, ಮೌಲ್ಯಮಾಪನ ಕುಲಸಚಿವರಾದ ಡಾ. ಎನ್.ಜಿ. ಕಣ್ಣೂರು, ವಿತ್ತಾಧಿಕಾರಿಗಳಾದ ಶ್ರೀಮತಿ ಜಯಂಬಿಕ ಉಪಸ್ಥಿತರಿದ್ದರು. ಡಾ. ಹನುಮಂತ ಜಂಗೆ ಸ್ವಾಗತಿಸಿದರು. ಸಂಗೀತ ವಿಭಾಗದವರು ರಾಷ್ಟ್ರಗೀತೆ ಮತ್ತು ಭಕ್ತಿ ಗೀತೆಗಳನ್ನು ಹಾಡಿದರು. ಡಾ. ಎಂ.ಬಿ. ಕಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.