ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ

ಬೀದರ, ನ 09: ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಕ್ತ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು.
ನಂತರ ಬೊಮಗೊಂಡೇಶ್ವರ ವೃತ್ತ ಬಳಿ ಕನಕದಾಸರ ಭಾವಚಿತ್ರ ಹೊತ್ತ ರಥ ಮೆರವಣಿಗೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಶಾಸಕ ಶೈಲೇಂದ್ರ ಬೆಲ್ದಾಳೆ, ಮಾಜಿ ಸಚಿವ ಬಂಡೇಪ್ಪ ಖಾಶಂಪೂರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಚಾಲನೆ ನೀಡಿದರು. ನಂತರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸಿಮಿನಾಗಣ್ಣ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು.