Home ಜಿಲ್ಲೆ ಕನಕದಾಸರ ತತ್ವಾದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪ

ಕನಕದಾಸರ ತತ್ವಾದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪ

ನವಲಗುಂದ,ನ೨೭: ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನರಗುಂದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹಾಯಕ ಪ್ರಾಧ್ಯಾಪಕಿ ರಾಧಾ ಎಂ. ಅವರು ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಸಮಾನತೆ, ಜಾತೀಯತೆ ಮತ್ತು ಮೂಢನಂಬಿಕೆಗಳನ್ನು ವಿರೋಧಿಸಿ ಸಮಾನತೆ, ಮಾನವೀಯತೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದರು. ಅವರ ಸಾಹಿತ್ಯ ಮತ್ತು ತತ್ವಚಿಂತನೆಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಗ್ರೇಡ್ -೧ ಪ್ರಾಂಶುಪಾಲರಾದ ಡಾ. ಎಂ. ಬಿ. ಬಾಗಡಿ ಅವರು ಕನಕದಾಸರ ಜೀವನ, ಸಾಧನೆ ಮತ್ತು ಸಾಹಿತ್ಯಿಕ ಕೊಡುಗೆಗಳನ್ನು ಸ್ಮರಿಸಿದರು.

ಶ್ರೀಧರ ಲೋನಕರ ಕಾರ್ಯಕ್ರಮ ನಿರೂಪಿಸಿ ಸರ್ವರನ್ನೂ ಸ್ವಾಗತಿಸಿದರು. ಸಾಂಸ್ಕöÈತಿಕ ಸಂಚಾಲಕರಾದ ಡಾ ಸಂತೋಷ ಹುಬ್ಬಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಶಿರಗುಪ್ಪಿ ವಂದನಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಚೈತ್ರಾ ಟಿ, ಸಮೀರ ಎಂ ನಧಾಪ, ಪ್ರತಿಭಾ ನಿಡಗುಂದಿ, ಜ್ಯೋತಿಭಾ ದೊಡಮನಿ,ರೇಣುಕಾ ಬಾಜಿರಾಹುತ, ನಾಗೇಶ್, ಈಶ್ವರಪ್ಪ ಕಾಲವಾಡ, ಬಾಬು ನಧಾಪ ಮುಂತಾದ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.