
ಯಾದಗಿರಿ: ೭೧ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಚಿರಂಜೀವಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಸಚಿವ ಶರಣಪ್ಪ ಪಾಟೀಲ್ ಹಾಗೂ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರಿಂದ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಸ್ವೀಕರಿಸಿದರು.
ಶಾಲೆಯ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಕನ್ನಡಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ಧ್ವಜಾರೋಹಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳಾದ ಶಾಲೆಯ ಮುಖ್ಯ ಗುರುಗಳಾದ ಶ್ರೀ ಜಯಪಾಲ ದೈಹಿಕ ಶಿಕ್ಷಕ ಸ್ಟಾನ್ಲಿ ವಿಕ್ಟೋರಿಯಾ ಪಾಲ್ರೆನ್ಸ್ ಪ್ರಕಾಶ್. ಹಣಮಂತರಾಯ.ಮAಜುಳಾಬಾಯಿ ಜ್ಯಾಸ್ಮೀನ್ ಲಾರೆನ್ಸ್ ಸುನಿತಾ ಮಲ್ಲಮ್ಮ ರುದ್ರೇಶ್ ಸೇರಿದಂತೆ ಇತರರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದರು.


















