Home ಜಿಲ್ಲೆ ಬೆಂಗಳೂರು ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಮಾಲೂರು, ಅ. ೯: ತಾಲೂಕು ಆಡಳಿತದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮಾರ್ಗದರ್ಶನದಲ್ಲಿ ನ. ೧ಕ್ಕೆ ೭೧ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಚರಿಸುವ ನಿಟ್ಟಿನಲ್ಲಿ ಅ. ೯ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಶಾಸಕ ಕೆ. ವೈ. ನಂಜೇಗೌಡ ಅವರ ಅಧ್ಯಕ್ಷತೆಯಲ್ಲಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.


ಕನ್ನಡಪರ, ಪ್ರಗತಿಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಡಳಿತಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಭೆಗೆ ಆಗಮಿಸಿ, ತಮ್ಮ ಅಮೂಲ್ಯ ಸಲಹೆ, ಸೂಚನೆ, ಅಭಿಪ್ರಾಯಗಳನ್ನು ನೀಡುವಂತೆ ತಹಶೀಲ್ದಾರ್ ಎಮ್. ವಿ. ರೂಪ ತಿಳಿಸಿದರು.


ನಾಡಹಬ್ಬವಾದ ೭೧ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಇಂದು ಬೆಳಿಗ್ಗೆ ೧೧.೦೦ ಗಂಟೆಗೆ ಶಾಸಕ ಕೆ. ವೈ. ನಂಜೇಗೌಡ ಅವರ ಅಧ್ಯಕ್ಷತೆಯಲ್ಲಿ ಸಮರ್ಥನಾ ಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು, ವಿನಾಯಕ ಪ್ರತಿನಿಧಿಗಳು ಮತ್ತು ಕನ್ನಡಪರ ಹೋರಾಟಗಾರರು ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.