ವಾರ್ಷಿಕೋತ್ಸವಗಳಲ್ಲಿ ಸಂಸ್ಕೃತಿ ಮೌಲ್ಯಗಳಿಗೆ ಗೌರವ ನೀಡುವಂತೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

ಕೊಲ್ಹಾರ: ಜ.೪:ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ದಿಂದ ತಹಶೀಲ್ದಾರ ಸಂತೋಷ ಮ್ಯಾಗೇರಿ ರವರಿಗೆ ಬುಧವಾರ ಮನವಿ ಸಲ್ಲಿಸಿದರು.
ಕರವೇ ಸ್ವಾಭಿಮಾನಿ ಬಣದ ತಾಲ್ಲೂಕು ಅಧ್ಯಕ್ಷ ನಾಗರಾಜ ಕುಂಬಾರ ಮಾತನಾಡಿ ಇಂದಿನ ಮಕ್ಕಳೇ ನಾಳಿನ ಪ್ರಜೆಗಳೇ ಹೀಗಾಗಿ ಇಂದು ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಕಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಶಾಲೆ ಹಾಗೂ ಕಾಲೇಜುಗಳು ಅದರ ಕೇಂದ್ರಗಳಾಗಿವೆ. ಆದರೆ ಕೆಲವು ಶಾಲಾ ಕಾಲೇಜುಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಒಳ್ಳೆಯ ದೇಶ ಭಕ್ತಿ ಗೀತೆ, ಭಾವ ಗೀತೆ, ಕನ್ನಡ ನಾಡ ನುಡಿ ಗೀತೆಗಳ ನೃತ್ಯ ಗಳಿಗೆ ಆದ್ಯತೆ ನೀಡದೆ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡಿಸುತ್ತಿರುವುದು ಪ್ರತಿ ವರ್ಷ ಕಂಡು ಬಂದಿದೆ. ಕಾರಣ ಈ ವರ್ಷದಿಂದ ಯಾವುದೇ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಕಳಿಗೆ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡಿಸಬಾರದು. ಒಂದು ವೇಳೆ ಮಾಡಿಸಿದರೆ ಆದಲ್ಲಿ ಕರವೇ ಸ್ವಾಭಿಮಾನ ಬಣದಿಂದ ಉಗ್ರ ಹೋರಾಟ ಮಾಡಲಾಗುವದು. ಆದ್ದರಿಂದ ಮಾನ್ಯರು ತಾವು ಇದಕ್ಕೆ ಅವಕಾಶ ಮಾಡಿಕೊಡದೆ ಕೊಲ್ಹಾರ ತಾಲ್ಲೂಕಿನಲ್ಲಿರುವ ಎಲ್ಲ ಶಾಲಾ ಕಾಲೇಜುಗಳಿಗೆ ತಾವು ಅದೇಶಿಸಬೇಕೆಂದು ತಮ್ಮಲ್ಲಿ ವಿನಂತಿಸುವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಮ್ಮಲಗಿ,ರಫೀಕ್ ಕಡ್ಡಾಗೋಳ,ಸುನೀಲ ಕುದರಿ,ಸುದೀಪ್ ಗುಂಜಾಳಕರ,ಬಸವರಾಜ ಅಪ್ಪಣ್ಣವರ ಇದ್ದರು,