ಕಾಶಿನಾಥ ಪಾಟೀಲರಿಗೆ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸೇವಾ ಪ್ರಶಸ್ತಿ ೨೦೨೫’

ಬೀದರ್:ಅ.೪:ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ೧೫೨ನೇ ಜನ್ಮದಿನಾಚರಣೆಯ ಅಂಗವಾಗಿ, ನವದೆಹಲಿ ಕೇಂದ್ರ ಸರ್ಕಾರದ ಎಂ.ಎಸ್.ಎA.ಇ. ಇಲಾಖೆಯಿಂದ ಬಾಪು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕಾಶಿನಾಥ ಪಾಟೀಲ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸೇವಾ ಪ್ರಶಸ್ತಿ-೨೦೨೫” ನೀಡಿ ಗೌರವಿಸಲಾಗಿದೆ.

ಸಾಮಾಜಿಕ ಸೇವೆ, ಸುಸ್ಥಿರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ಕಾಶಿನಾಥ ಪಾಟೀಲ ಅವರು ನೀಡಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ ೦೨-೧೦-೨೦೨೫ ರಂದು ನವದೆಹಲಿಯಲ್ಲಿ ಗಣ್ಯರ ಸಮ್ಮುಖದಲ್ಲಿ ನೆರವೇರಿತು.

ಈ ಗೌರವವು ಕರ್ನಾಟಕ ರಾಜ್ಯದ ಹಿಂದುಳಿದ ಪ್ರದೇಶ ಬೀದರ ಜಿಲ್ಲೆಗೆ ಮತ್ತು ಕಲ್ಯಾಣ ಕರ್ನಾಟಕ ಪರಿಸರ ಸಂಘಟನೆ ಸಮಿತಿಯ ಕಾರ್ಯಚಟುವಟಿಕೆಗೆ ಸಿಕ್ಕಿರುವ ಅಭಿಮಾನದ ಸಂಗತಿಯಾಗಿದೆ ಎಂದು ಬಾಪು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಸುನಿತಾ ಅಶೋಕ ಹಾಗೂ ಉಪಾಧ್ಯಕ್ಷೆ ಅನ್ನಪೂರ್ಣೇಶ್ವರಿ ಅವರು ತಿಳಿಸಿದ್ದಾರೆ.