Home ಜಿಲ್ಲೆ ಟಿವಿ ಮತ್ತು ಮೊಬೈಲ್‍ನಿಂದ ಮಕ್ಕಳನ್ನು ದೂರವಿಡಿ: ಸೂರ್ಯಕಾಂತ ದಂಡಿ ಸಲಹೆ

ಟಿವಿ ಮತ್ತು ಮೊಬೈಲ್‍ನಿಂದ ಮಕ್ಕಳನ್ನು ದೂರವಿಡಿ: ಸೂರ್ಯಕಾಂತ ದಂಡಿ ಸಲಹೆ

ಬೀದರ: ಮಾ.20:ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳು ಟಿವಿ ಮತ್ತು ಮೊಬೈಲ್‍ಗಳಿಗೆ ಅತಿಯಾಗಿ ಆಕರ್ಷಿತರಾಗಿ, ಅವುಗಳಿಂದ ದೂರವಾಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಸೂರ್ಯಕಾಂತ ದಂಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬೀದರ ತಾಲೂಕಿನ ಕಾಡವಾದ ಗ್ರಾಮದಲ್ಲಿ ಮಾರುತಿ ಮಾಸ್ಟರ್ ಶಿಕ್ಷಣ ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿರುವ ವಿದ್ಯಾಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಇಂದಿನ ಕಾಲದಲ್ಲಿ ಮಕ್ಕಳಲ್ಲಿ ಓದುವ ಅಭಿರುಚಿ ಕಡಿಮೆಯಾಗುತ್ತಿದ್ದು, ಹೆಚ್ಚಿನ ಸಮಯವನ್ನು ಟಿವಿ ಮತ್ತು ಮೊಬೈಲ್‍ಗಳಲ್ಲಿ ಕಳೆಯುತ್ತಿರುವುದರಿಂದ ಅವರ ಮನೋವಿಕಾಸ ಮತ್ತು ಶೈಕ್ಷಣಿಕ ಪ್ರಗತಿಗೆ ಹಾನಿಯಾಗುತ್ತಿದೆ ಎಂದು ಹೇಳಿದರು.

ಮಕ್ಕಳು ಟಿವಿ ಮತ್ತು ಮೊಬೈಲ್‍ಗಳ ದಾಸರಾಗುತ್ತಿರುವುದರಿಂದ, ಪಾಲಕರು ಹಾಗೂ ಶಿಕ್ಷಕರು ಈ ಕುರಿತು ಹೆಚ್ಚಿನ ಜಾಗೃತಿ ವಹಿಸಬೇಕು. ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆಗೆ ನಿಬರ್ಂಧ ವಿಧಿಸಿರುವ ವಿಷಯವನ್ನು ಎಲ್ಲರೂ ಅರಿತು, ಅದರ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಬಗದಲ ಪೆÇಲೀಸ್ ಠಾಣೆಯ ಎಎಸ್‍ಐ ಸುನೀಲಕುಮಾರ ಕೋರೆ ಉದ್ಘಾಟಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಾರುತಿ ಮಾಸ್ಟರ್ ಪ್ರಸ್ತಾವಿಕವಾಗಿ ಮಾತನಾಡಿ, ಶಾಲೆಯ ಬೆಳವಣಿಗೆ ಹಾಗೂ ವಿದ್ಯಾರ್ಥಿಗಳ ಸಾಧನೆಗಳ ಕುರಿತು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ಮಾಸ್ಟರ್ ವಹಿಸಿಕೊಂಡರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಘಾಳೆಪ್ಪಾ ಗುಂಜಾಟಿ, ಫಾಯುಂ ಪಟೇಲ್, ಮಲ್ಲು ಬರೂರ್, ಶರಣಪ್ಪ ಖಾಸೆಪೂರ್, ಸನ್ಮುಖ ವಾಲಿಕರ, ರವೀಂದ್ರ ಜಾದವ, ವಿದ್ಯಾಸಾಗರ ಧಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಕಿ ಸಂಗೀತಾ ಸ್ವಾಗತ ಕೋರಿದರು. ಶಿಕ್ಷಕಿ ಶ್ರೀದೇವಿ ವಂದಿಸಿದರು. ಬಳಿಕ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು, ಇದಕ್ಕೆ ಪೆÇೀಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪೆÇೀಷಕರು, ಮಹಿಳೆಯರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.