
ಬೀದರ್:ಡಿ.19: ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ಶ್ರೀ ಬಸವಲಿಂಗ ಅವಧೂತರ ಸೇವಾ ಸಮಿತಿ ವತಿಯಿಂದ ಡಿಸೆಂಬರ್ 21 ರಂದು ಸಂಜೆ 5ಕ್ಕೆ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ದೇಗಲಮಡಿ ಹಾಗೂ ಬಸವಕಲ್ಯಾಣ ಆಶ್ರಮದ ಪೀಠಾಧಿಪತಿ ಡಾ. ಬಸವಲಿಂಗ ಅವಧೂತರ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದಕ್ಕೂ ಮುನ್ನ ಗ್ರಾಮದ ಮುಖ್ಯ ದ್ವಾರದಿಂದ ಬಸವೇಶ್ವರ ವೃತ್ತದ ವರೆಗೆ ಶ್ರೀಗಳ ಭವ್ಯ ಮೆರವಣಿಗೆ ಜರುಗಲಿದೆ. ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಲಿವೆ.
ಭಕ್ತರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಮಿತಿಯ ಪ್ರಮುಖರು ಮನವಿ ಮಾಡಿದ್ದಾರೆ.

























