Home ಜಿಲ್ಲೆ ೨೩ರಂದು ಕಿತ್ತೂರು ರಾಣಿ ಚೆನ್ನಮ್ಮ, ನ.೧೧ರಂದು ಒನಕೆ ಓಬವ್ವ ಹಾಗೂ ನ.೨೭ರಂದು ಕನಕದಾಸ ಜಯಂತಿ:ಪೂರ್ವಭಾವಿ ಸಭೆ

೨೩ರಂದು ಕಿತ್ತೂರು ರಾಣಿ ಚೆನ್ನಮ್ಮ, ನ.೧೧ರಂದು ಒನಕೆ ಓಬವ್ವ ಹಾಗೂ ನ.೨೭ರಂದು ಕನಕದಾಸ ಜಯಂತಿ:ಪೂರ್ವಭಾವಿ ಸಭೆ

ಸಂಜೆವಾಣಿ ವಾರ್ತೆ,
ವಿಜಯಪುರ, ಅ.೧೩: ಕಿತ್ತೂರು ರಾಣಿ ಚೆನ್ನಮ್ಮ, ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಕ್ಟೋಬರ್ ೨೩ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ನವೆಂಬರ್ ೧೧ರಂದು ಒನಕೆ ಓಬವ್ವ ಜಯಂತಿ ಹಾಗೂ ನವೆಂಬರ್ ೨೭ರಂದು ಕನಕದಾಸ ಜಯಂತಿಯನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು ಎಂದರು.
ಚೆನ್ನಮ್ಮ ಜಯಂತಿ: ಅ.೨೩ರಂದು ಬೆಳಿಗ್ಗೆ ೯.೩೦ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದವರೆಗೆ ವಿವಿಧ ಕಲಾತಂಡಗಳೊAದಿಗೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬಳಿಕ ವೇದಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಒನಕೆ ಓಬವ್ವ ಜಯಂತಿ: ನ.೧೧ರಂದು ರಂಗಮAದಿರದಲ್ಲಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ವಿಶೇಷ ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅವರ ಅಪ್ರತಿಮ ಸಾಹಸ, ಶೌರ್ಯ ಹಾಗೂ ಜೀವನಾದರ್ಶಗಳನ್ನು ಜನರಿಗೆ ಪರಿಚಯಿಸಲಾಗುವುದು.
ಕನಕದಾಸ ಜಯಂತಿ: ನ.೨೭ರಂದು ಬೆಳಿಗ್ಗೆ ೯ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದವರೆಗೆ ಗೊಂಬೆ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊAದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮಹನೀಯರ ಶೌರ್ಯ, ಭಕ್ತಿ, ಸಾಹಿತ್ಯ ಹಾಗೂ ಸಾಮಾಜಿಕ ಸಮಾನತೆಯ ಸಂದೇಶಗಳನ್ನು ಜನರಿಗೆ ತಲುಪಿಸುವುದೇ ಜಯಂತಿ ಆಚರಣೆಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಾರ್ವಜನಿಕರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ರಾಜಶೇಖರ ಧೈವಾಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.