
ಮಾಲೂರು.ಆ.೫: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಲ್ವರು ಶಾಸಕರಿದ್ದರು, ಸಚಿವ ಸ್ಥಾನ ನೀಡದೆ ಜಿಲ್ಲೆಗೆ ಅನ್ಯಾಯವಾಗಿದೆ. ಜಿಲ್ಲೆಯ ಅಭಿವೃದ್ಧಿಯು ಕುಂಠಿತಗೊಳ್ಳುತ್ತದೆ, ದಲಿತ ಸಮುದಾಯದ ೩ ಬಾರಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿರುವ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಒಕ್ಕಲಿಗ ಸಮಾಜದಿಂದ ಎರಡು ಬಾರಿ ಶಾಸಕರಾಗಿರುವ ಶಾಸಕ ಕೆ.ವೈ.ನಂಜೇಗೌಡ ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಮಾಲೂರು ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡುತ್ತೇವೆ ಎಂದು ಯೋಜನಾ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ. ವಿಜಯ ನರಸಿಂಹ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ೬ ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಭದ್ರಕೋಟೆಯಾಗಿದ್ದು,ಪ್ರಸ್ತುತ ೪ ಮಂದಿ ಶಾಸಕರು ಆಯ್ಕೆಯಾಗಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿಯೂ ಸಹ ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡಲಿಲ್ಲ ಪ್ರಸ್ತುತ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ ಮಾಡಿದ್ದು ಈಗಲೂ ಸಹ ಕಾಂಗ್ರೆಸ್ ಹೈಕಮಾಂಡ್,ಹಿಂದುಳಿದ ಜಿಲ್ಲೆಯಾದ ಕೋಲಾರ ಜಿಲ್ಲೆಗೆ ಸಚಿವರನ್ನು ನೀಡಬೇಕಾಗಿತ್ತು,ಆದರೆ ಜಿಲ್ಲೆಗೆ ಸಚಿವ ಸ್ಥಾನ ನೀಡಲಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷ ಹೇಮಮಾಲಿನಿ, ದರಕಾಸ್ತು ಸಮಿತಿ ಅಧ್ಯಕ್ಷ ಎಸ್ ಸಿ ನಾರಾಯಣಸ್ವಾಮಿ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಅಶ್ಪತ್ ರೆಡ್ಡಿ, ನಗರಸಭೆ ಮಾಜಿ ಸದಸ್ಯ ಮುರುಳಿಧರ್, ಕಾಂಗ್ರೆಸ್ ಪಕ್ಷದ ಯುವ ಘಟಕದ ಅಧ್ಯಕ್ಷ ತನ್ವೀರ್ ಅಹ್ಮದ್, ಇನ್ನಿತರರು ಹಾಜರಿದ್ದರು.


































