
ಬೆಂಗಳೂರು: ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಕುರಿತಂತೆ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಇದೀಗ ಇಡಿ ಅಧಿಕಾರಿಗಳು, ಶಿವಶಂಕರಪ್ಪ ಸಾಹುಕಾರ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಪಿಎಸ್ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಅವರ ಮನೆ ಮೇಲೆ ಇ.ಡಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಸಾಹುಕಾರ್ ಶಿವಶಂಕರಪ್ಪರ ಬಂಧನವಾಗಿದೆ.
ಕೆಪಿಎಸ್ ಸಿ ನೇಮಕಾತಿ ಹಗರಣದಲ್ಲಿ ಶಿವಶಂಕರಪ್ಪ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.
























