Home ಕ್ರೈಂ ಸುದ್ದಿಗಳು ಜಮೀನು ಆಸ್ತಿ ವಿವಾದ: ಮಾರಕಾಸ್ತ್ರಗಳಿಂದ ಆರು ಜನರ ಭೀಕರ ಹತ್ಯೆ

ಜಮೀನು ಆಸ್ತಿ ವಿವಾದ: ಮಾರಕಾಸ್ತ್ರಗಳಿಂದ ಆರು ಜನರ ಭೀಕರ ಹತ್ಯೆ

ವಿಜಯಪುರ/ಚಡಚಣ ಮೇ. 30: ಜಮೀನು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಶುಕ್ರವಾರ ಸಂಜೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಚಂದು ನಿರಾಳೆ(56), ದುಂಡಪ್ಪ ನಿರಾಳೆ(65), ಶಿವಪುತ್ರ ನಿರಾಳೆ(60), ರಾಹುಲ್ ನಿರಾಳೆ(35), ಸಮರ್ಥ ನಿರಾಳೆ(24), ಶಬ್ಬೀರ್ ನದಾಫ್(50) ಕೊಲೆಯಾದವರು.
ಜಿಲ್ಲಾ ಪೆÇಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಇತರ ಪೆÇಲೀಸ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಲೆಯಾದವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹೆಚ್ಚಿನ ಪೆÇಲೀಸರನ್ನು ನಿಯೋಜಿಸಲಾಗಿದೆ.

ಘಟನೆ ವಿವರ:
15-20 ಜನರನ್ನು ಒಳಗೊಂಡ ದುಷ್ಕರ್ಮಿಗಳ ಗುಂಪೆÇಂದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ಏಕಾಏಕಿ ದಾಳಿ ನಡೆಸಿ, ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಚಡಚಣ ಪಟ್ಟಣದ ನಿರಾಳೆ ಕುಟುಂಬದವರು ಗೋವಿಂದಪುರ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೇರಿದ 24 ಎಕರೆ ವಿವಾದಿತ ಜಮೀನನ್ನು ಆರು ತಿಂಗಳ ಹಿಂದೆ ಖರೀದಿ ಮಾಡಲು ಮುಂದಾಗಿತ್ತು. ಈ ವೇಳೆ ಗ್ರಾಮಸ್ಥರು ವಿವಾದಿತ ಜಮೀನು ಖರೀದಿಸದಂತೆ ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ವಿರೋಧದ ನಡುವೆಯೂ ನಿರಾಳೆ ಕುಟುಂಬದವರು ಜಮೀನು ಖರೀದಿ ಮಾಡಿದ್ದರು. ಅಲ್ಲದೇ, ಇದೀಗ ಟ್ರ್ಯಾಕ್ಟರ್, ಜೆಸಿಬಿ ಮೂಲಕ ಹೊಲವನ್ನು ಸ್ವಚ್ಛಗೊಳಿಸಿ, ಕೃಷಿಗೆ ಸಜ್ಜುಗೊಳಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಮೊದಲು ಗುಂಡು ಹಾರಿಸಿದ್ದು, ಗುಂಡು ಯಾರಿಗೂ ತಗಲಿಲ್ಲ. ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಮಾರಣಹೋಮ ನಡೆಸಿರುವುದಾಗಿ ಪ್ರಾಥಮಿಕ ಮಾಹಿತಿ ಲಭಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಶವಗಳನ್ನು ಚಡಚಣ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ವಿಜಯಪುರ ಬಿ.ಎಲ್. ಡಿ. ಇ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಕೊಲೆಗಾರರು ಯಾರು ಎಂಬ ಮಾಹಿತಿ ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ತನಿಖೆ ನಡೆದಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ತನಿಖೆ ಮುಂದುವರೆದಿದ್ದು ಕೊಲೆಗೆ ಯಾರು ಕಾರಣರಾಗಿದ್ದಾರೆ ಎಂಬುವುದು ನಿಖರವಾಗಿ ಬೆಳಕಿಗೆ ಬರಬೇಕಿದೆ.
ಕೊಲೆಯಾದ ಆರು ಜನರ
ಮೃತ ದೇಹಗಳ ಮರಣೋತ್ತರ ಪರೀಕ್ಷೆ
ವಿಜಯಪುರದ
ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಮಾಡಿದ್ದು,
ಮರಣೋತ್ತರ ಪರೀಕ್ಷೆ ಬಳಿಕ ಚಡಚಣ ಪಟ್ಟಣಕ್ಕೆ ಶವಗಳ ಕುಟುಂಬಸ್ಥರು ತರಲಿದ್ದಾರೆ. ಮಧ್ಯಾಹ್ನದ ವೇಳೆಗೆ ಅಂತ್ಯಕ್ರಿಯೆ ಆಗುವ ಸಾಧ್ಯತೆ ಇದೆ.
ಚಡಚಣ ಪಟ್ಟಣದಲ್ಲಿ ಭಾರೀ ಪೆÇಲೀಸ್ ಭದ್ರತೆ ಮಾಡಿದ್ದು, ಹತ್ಯೆಯಾದವರು ಚಡಚಣ ಭಾಗದಲ್ಲಿ ಪ್ರಭಾವಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಡಚಣ ಪಟ್ಟಣದಲ್ಲಿ ಭದ್ರತೆ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಐಜಿಪಿ ಸಂದೀಪ್ ಪಾಟೀಲ್, ಎಸ್ ಪಿ ಲಕ್ಷ್ಮಣ ನಿಂಬರಗಿ ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಂತಕರ ಪತ್ತೆಗೆ ವಿಶೇಷ ತಂಡಗಳ ರಚನೆ ಮಾಡಿದ್ದು, ಚಡಚಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.