Home ಜಿಲ್ಲೆ ಕಲಬುರಗಿ 25 ರಂದು ನಡೆಯುವ ಪ್ರತಿಭಟನೆಗೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ; ಮಲ್ಲಿಕಾರ್ಜುನ ಖರ್ಗೆ

25 ರಂದು ನಡೆಯುವ ಪ್ರತಿಭಟನೆಗೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ; ಮಲ್ಲಿಕಾರ್ಜುನ ಖರ್ಗೆ

ಅಫಜಲಪೂರ ;ಮಾ.17: ತಾಲೂಕಿನ ಎಲ್ಲಾ ಹಳ್ಳಿಗಳಿಂದ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಐತಿಹಾಸಿಕ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಹೊಲೆಯ(ಬಲಗೈ) ಸಮುದಾಯದ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳು ಮಾ. 25 ರಂದು ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಎಲ್ಲರೂ ಭಾಗವಹಿಸಿ ನಾಗಮೋಹನ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ಒಳಮೀಸಲಾತಿ ವರದಿಯನ್ನು ತಿರಸ್ಕರಿಸಬೇಕು ಹಾಗೂ ಪರಿಶಿಷ್ಟ ಜಾತಿಯ ಇತರೆ ಅನೇಕ ಸಮುದಾಯಗಳ ಶೈಕ್ಷಣಿಕ ಮತ್ತು ಉದ್ಯೋಗಾವಕಾಶಗಳನ್ನು ಕಸಿದುಕೊಳ್ಳುವ ಅನ್ಯಾಯವನ್ನು ತಡೆಗಟ್ಟಬೇಕು ಎಂಬ ಆಗ್ರಹದೊಂದಿಗೆ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಖರ್ಗೆ ಹೇಳಿದರು.

ಈ ಪ್ರತಿಭಟನೆಯನ್ನು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ನಡೆಸಲಾಗುತ್ತಿದ್ದು, ಪರಿಶಿಷ್ಟ ಜಾತಿಯ ಹಲವಾರು ಸಮುದಾಯಗಳ ಹಕ್ಕುಗಳು ಮತ್ತು ಭವಿಷ್ಯವನ್ನು ಕಾಪಾಡುವ ಉದ್ದೇಶದಿಂದ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಆ ಕಾರಣದಿಂದ ಅಫಜಲಪುರ ತಾಲ್ಲೂಕಿನ ಪ್ರತಿಯೊಂದು ಗ್ರಾಮದಿಂದ ಹೆಚ್ಚಿನ ಪ್ರಮಾಣದಲ್ಲಿ ಐತಿಹಾಸಿಕ ಪ್ರತಿಭಟನೆಯಲ್ಲಿ ಭಾಗವಹಿಸಿ ನಮಗೆಲ್ಲಾ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ನ್ಯಾಯ ಪಡೆಯಲು ನಾವೆಲ್ಲರೂ ಸಾಕ್ಷಿಯಾಗಬೇಕಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಸಮಾಜದ ಬಂಧುಗಳಲ್ಲಿ ಮನವಿ ಮಾಡಿಕೊಂಡರು.

ಗೌರವಾಧ್ಯಕ್ಷ ಭೀಮರಾವ್ ಗೌರ, ಮಹಾಲಿಂಗ ಅಂಗಡಿ, ಡಾ.ಹಣಮಂತರಾವ ದೊಡ್ಮನಿ, ನಾಗೇಶ್ ಕೊಳ್ಳಿ, ಡಾ. ಶಾಂತಮಲ್ಲ ಹೊನ್ನುಂಗರ್, ರವಿ ಗೌರ್, ಮಹಾಂತೇಶ ಬಳೂಂಡಗಿ ಅಪ್ಪಾರಾವ್ ಸಂಗಮಕರ್, ಗೌತಮ್ ಸಕ್ಕರಗಿ, ಶಾಮ ಹೊಸ್ಮನಿ ಸೇರಿದಂತೆ ಇನ್ನಿತರರು ಹಲವಾರು ಮುಖಂಡರು ಇದ್ದರು.