
ಬೆಂಗಳೂರು, ನ.೨೮- ರಾಜ್ಯದಲ್ಲಿ ಅಕ್ಕಾಪಡೆ,ಗೃಹ ಲಕ್ಷ್ಮಿಸಂಘ ಸ್ಥಾಪನೆ ಹಾಗೂ ರಾಜ್ಯಾದ್ಯಂತ ೫ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ,ಯುಕೆಜಿ ಆರಂಭಕ್ಕೆ ಇಂದು ಚಾಲನೆ ನೀಡಲಾಯಿತು.
ಬೆಂಗಳೂರಿನ ಅರಮನೆ ಮೈದಾನಲ್ಲಿಂದು ನಡೆದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತುಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ಅಕ್ಕಾಪಡೆ, ಗೃಹಲಕ್ಷ್ಮಿ ಸಂಘ ಸ್ಥಾಪನೆ ಹಾಗೂ ಅಂಗನವಾಡಿಗಳಲ್ಲಿ ಎಲ್‌ಕೆಜಿ,ಯುಕೆಜಿ ಆರಂಭದ ಘೋಷಣೆ ಮಾಡಿದರು.
ಮಹಿಳೆಯರು, ಮಕ್ಕಳಿಗೆ ಸುರಕ್ಷತೆ, ರಕ್ಷಣೆ ಒದಗಿಸಲು ದೇಶದಲ್ಲೇ ಮೊದಲಬಾರಿಗ ಅಕ್ಕಾಪಡೆ ಯೋಜನೆಯನ್ನು ರಾಜ್ಯದಲ್ಲ ಜಾರಿಗೊಳಿಸಲಾಗುತ್ತಿದೆ. ಹಾಗೆಯೇ ಗೃಹ ಲಕ್ಷ್ಮಿಯೋಜನೆಯ ೧ ಕೋಟಿ ೨೪ ಲಕ್ಷದ ೧೨ ಸಾವಿರ ಫಲಾನುಭವಿಗಳಿಗಾಗಿ ಗೃಹಲಕ್ಷ್ಮಿ ವಿವಿಧೋದ್ಧೇಶ ಸಹಕಾರಿ ಸಂಘ ಸ್ಥಾಪಿಸಲಾಗಿದೆ. ಯೋಜನೆಯ ಸದಸ್ಯರೇ ಈ ಸಂಘದ ಷೇರುದಾರರಾಗಿದ್ದು, ಮಹಿಳೆಯರಿಗೆ ಗೃಹಲಕ್ಷ್ಮಿ ಸಂಘದ ಮೂಲಕ ಸಾಲ ಸೌಲಭ್ಯ ಒದಗಿಸಲಾಗುತ್ತೆದೆ. ಇದರ ಜತೆಗೆರಾಜ್ಯದ ಐದು ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವ ಯೋಜನೆಗೂ ಚಾಲನೆ ನೀಡಲಾಗಿದೆ. ಇದರಿಂದ ೧ ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪ್ರಯೋಜನವಾಗಲಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಡಾ.ಹೆಚ್.ಸಿ.ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಈಶ್ವರಖಂಡ್ರೆ, ಕೆ.ಹೆಚ್.ಮುನಿಯಪ್ಪ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ, ಮಾಜಿ ಸಚಿವರಾದ ರಾಣಿಸತೀಶ್, ಮೋಟಮ್ಮ, ಕೆಪಿಸಿಸಿ ಮಹಿಳಾ ಮೋರ್ಚಾ ವಿಭಾಗದ ಅಧ್ಯಕ್ಷೆ ಸೌಮ್ಯಾರೆಡ್ಡಿ, ಶಾಸಕಿ ರೂಪಕಲಾ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಸೇರಿದಂತೆ ಹಲವು ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅರಮನೆ ಮೈದಾನದಲ್ಲಿ ನಡೆದ ಈಕಾರ್ಯಕ್ರಮದಲ್ಲಿ ಭಾರಿ ಜನಸ್ತೋಮವೇ ನೆರದಿತ್ತು.

































