Home ಜಿಲ್ಲೆ ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

ಔರಾದ್ : ತಾಲೂಕಿನ ಸಂತಪೂರ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಸ್ಥರಿಗೆ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಇ-ಸ್ವತ್ತು ಪಡೆಯಲು ಅನುಕೂಲವಾಗುವ ಉದ್ದೇಶದಿಂದ “ನನ್ನ ಸ್ವತ್ತು ನನ್ನ ಹಕ್ಕು” ಅಭಿಯಾನಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಚಾಲನೆ ನೀಡಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮನೆಗಳ ಮಾಲೀಕರು ತಮ್ಮ ಆಸ್ತಿ ಸಂಬAಧಿತ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ, ಆಸ್ತಿಗಳ ಡಿಜಿಟಲೀಕರಣ ಖಾತೆಯನ್ನು ಪಡೆಯಲು ತಿಳಿಸಿದರು. ಬಳಿಕ ಒಟ್ಟು ೪೭ ಅರ್ಜಿಗಳು ಸ್ವೀಕರಿಸಲಾಗಿದ್ದು, ೯ ಇ-ಸ್ವತ್ತು ದಾಖಲೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ಹಾಗೂ ಪ್ರಕ್ರಿಯೆ ಪ್ರಗತಿಯಲ್ಲಿದೆ. ಗ್ರಾಮಸ್ಥರು ಈ ಅಭಿಯಾನದ ಸದುಪಯೋಗ ಪಡೆದುಕೊಂಡು ತಮ್ಮ ಮನೆಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಇ-ಸ್ವತ್ತು ಖಾತೆ ಪಡೆಯುವಂತೆ ಮನವಿ ಮಾಡಿದರು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು ಮಾತನಾಡಿ,
“ನನ್ನ ಸ್ವತ್ತು ನನ್ನ ಹಕ್ಕು” ಈ ಮಹತ್ವಾಕಾಂಕ್ಷಿ ಅಭಿಯಾನದಲ್ಲಿ ಸಾರ್ವಜನಿಕರು ಪಾಲ್ಗೊಂಡು, ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ ತಮ್ಮ ಆಸ್ತಿಯ ಇ-ಸ್ವತ್ತು ಮೂಲಕ ಡಿಜಿಟಲ್ ಖಾತೆ ಪಡೆಯಲು ಮನವಿ ಮಾಡಿದರು. ಈಗಾಗಲೇ ಗ್ರಾಮ ಪಂಚಾಯತಿ ಅಧಿಕಾರಿಗಳು ಗ್ರಾಮದ ಮನೆ-ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ್, ಅಮರ ಬಿರಾದಾರ್, ಶಂಕರಸ್ವಾಮಿ, ರಾಜಕುಮಾರ್, ನಸೀರೊದ್ದಿನ್, ಗುಂಡಪ್ಪ, ಇರ್ಫಾನ್, ಕುಂದನಾಬಾಯಿ, ಶೋಭಾವತಿ, ಸುಮಿತ್ರಾದೇವಿ, ಗ್ರಾಮ ಪಂಚಾಯತಿ ಸಿಬ್ಬಂದಿಯವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.