
ಕಲಬುರಗಿ,ಆ.1-ನಗರದ ಜಿಲ್ಲಾ ಲಸಿಕಾ ಉಗ್ರಾಣ ಕೇಂದ್ರದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಎಊPIಇಉಔ ಸಂಯುಕ್ತ ಆಶ್ರಯದಲ್ಲಿ ಗುರುವಾರ “ಗರ್ಭಧಾರಣೆ ಪೂರ್ವ ಆರೈಕೆ” ತರಬೇತಿ ಕಾರ್ಯಕ್ರಮವನ್ನು ಸಸಿಗೆ ನೀರೆಯೋ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಯಂದಿರು ಮತ್ತು ಶಿಶುಗಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಹಾಗೂ ಸಮಗ್ರ ಆರೋಗ್ಯ ಅಭಿವೃದ್ಧಿ ಗುರಿಯನ್ನು ತಲುಪುವ ನಿಟ್ಟಿನಲ್ಲಿ, ‘ಗರ್ಭಧಾರಣೆ ಪೂರ್ವ ಆರೈಕೆ’ (Pಡಿe-Pಡಿegಟಿಚಿಟಿಛಿಥಿ ಅಚಿಡಿe) ಕಾರ್ಯಕ್ರಮದ ತರಬೇತಿಯನ್ನು ಝಾಫಿಗೋ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಆಯೋಜಿಸಲಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಆಯುಷ್ಮಾನ್ ಅರೋಗ್ಯ ಕೇಂದ್ರಗಳಲ್ಲಿ (ಂಂಏ) ಈ ಗರ್ಭಧಾರಣೆ ಪೂರ್ವ ಆರೈಕೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಗರ್ಭಧಾರಣೆಗೂ ಮೊದಲೇ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಿಗೆ ಸೂಕ್ತ ಆರೈಕೆ ಮತ್ತು ಜಾಗೃತಿ ಮೂಡಿಸುವ ಮೂಲಕ ತಾಯಿ ಹಾಗೂ ಮಗುವಿನ ಆರೋಗ್ಯವನ್ನು ಉತ್ತಮಪಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಸಿದ್ದು ಪಾಟೀಲ ಅವರು ಮಾತನಾಡಿ, ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯ ಸುಧಾರಣೆಗೆ ಈ ಯೋಜನೆ ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಸರ್ವೇಕ್ಷಣಾ ಅಧಿಕಾರಿ ಡಾ.ರಾಕೇಶ್ ಕಾಂಬಳೆ, ಪ್ರಾಂಶುಪಾಲರು ಜಿಲ್ಲಾ ತರಬೇತಿ ಕೇಂದ್ರ ಹಾಗೂ ಜಿಲ್ಲಾ ಕಾಲರ ನಿಯಂತ್ರಣಾಧಿಕಾರಿ ಡಾ.ರವಿಕಾಂತಿ ಕ್ಯಾತನಾಳ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂತೋಷ ಅಲಗೂರ, ಅಫಜಲಪುರ ತಾಲೂಕಾ ಆರೋಗ್ಯಾಧಿಕಾರಿ ಡಾ.ಚೇತನ್ ಧುಮಾಲೆ ವೇದಿಕೆ ಇದ್ದರು.
ಜಿಲ್ಲಾ ಕಾರ್ಯಕ್ರಮ ಸಂಯೋಜಕ ರವೀಂದ್ರ ಠಾಕೂರ್, ಜಿಲ್ಲಾ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಅಧಿಕಾರಿ ವಿಶ್ವನಾಥ ಸಣ್ಣೂರ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಎhಠಿiego ತಂಡದ ಪ್ರತಿನಿಧಿಗಳಾದ ಅರವಿಂದ ಮಸಳಿ, ಹಿರಿಯ ಕಾರ್ಯಕ್ರಮ ಅಧಿಕಾರಿಗಳಾದ ಸುನಿಲ್ ಕುಮಾರ, ಚನ್ನಬಸು ಬಿರಾದರ್, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಗ್ಯಾನಪ್ಪ, ತಾಲೂಕು ಸಲಹೆಗಾರರಾದ ಸಾಬಪ್ಪ ಸಿ.ಕೆ ಹಾಗೂ ಪ್ರಾಥಮಿಕ ಅರೋಗ್ಯ ಸುರಕ್ಷಣಾಧಿಕಾರಿಗಳು, ಅರೋಗ್ಯ ನಿರೀಕ್ಷಣಾಧಿಕಾರಿಗಳು ಪಾಲ್ಗೊಂಡು ತರಬೇತಿ ಯಶಸ್ವಿಗೊಳಿಸಿದರು.





























