ಪೌರಕಾರ್ಮಿಕರ ಸಂವಾದಕ್ಕೆ ಚಾಲನೆ

ಬೆಂಗಳೂರು, ನ. ೨೭- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಪಿ.ರಘು ಅವರ ಅಧ್ಯಕ್ಷತೆಯಲ್ಲಿ ಇಂದು ಯಲಹಂಕದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಉತ್ತರ ನಗರ ಪಾಲಿಕೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಲೋಡರ್ಸ್, ಕ್ಲೀನರ್ಸ್ ಮತ್ತು ಡ್ರೈವರ್ಸ್ ಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಅವರು ಚಾಲನೆ ನೀಡಿದರು .


ಈ ಸಂವಾದಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್, ಬೆಂಗಳೂರು ಉತ್ತರ ನಗರ ಪಾಲಿಕೆಯ (ಅಭಿವೃದ್ಧಿ) ಅಪರ ಆಯುಕ್ತರಾದ ಲತಾ. ಆರ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಸುಮಯ್ಯಾ ರೂಹಿ, ಬೆಂಗಳೂರು ಉತ್ತರ ನಗರ ಪಾಲಿಕೆಯ (ಬ್ಯಾಟರಾಯನಪುರ ವಲಯ) ಜಂಟಿ ಆಯುಕ್ತರಾದ ಮೊಹಮ್ಮದ್ ನಯೀಮ್ ಮೊಮಿನ್, ಬೆಂಗಳೂರು ಉತ್ತರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಅವರು ಸೇರಿದಂತೆ ಪೌರಕಾರ್ಮಿಕರು ಮತ್ತು ಲೋಡರ್ಸ್, ಕ್ಲೀನರ್ಸ್ ಮತ್ತು ಡ್ರೈವರ್ಸ್ ಕಾರ್ಮಿಕರು ಉಪಸ್ಥಿತರಿದ್ದರು.