
ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯಸ್ಮರಣೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಐದು ದಿನಗಳ ವಿವಿಧ ಕಾರ್ಯಕ್ರಮಗಳಿಗೆ ಶನಿವಾರ ಕಲಬುರಗಿ ನಗರದಲ್ಲಿ ಚಾಲನೆ ದೊರೆಯಿತು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳ 30ಕ್ಕೂ ಹೆಚ್ಚು ಶಿಕ್ಷಕರಿಗೆ “ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರು ಇತರ ಗಣ್ಯರೊಂದಿಗೆ ಐದು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಶಸ್ತಿ ಪ್ರದಾನ ಮಾಡಿ ಭಾವುಕರಾಗಿ ಮಾತನಾಡಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು, ಶಿಕ್ಷಣ ಮತ್ತು ಶಿಕ್ಷಕರು ಪೂಜ್ಯ ಡಾ. ಅಪ್ಪಾಜಿಯವರ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದರು. ಶಿಕ್ಷಕರ ಸೇವೆಯನ್ನು ಗುರುತಿಸಿ ಅವರನ್ನು ಗೌರವಿಸುವುದೇ ಡಾ. ಅಪ್ಪಾಜಿಯವರಿಗೆ ಸಲ್ಲಿಸುವ ಸೂಕ್ತ ಗೌರವವಾಗಿದೆ ಎಂದು ಹೇಳಿದರು. “ಡಾ. ಅಪ್ಪಾಜಿಯವರು ತಮ್ಮ ಜೀವನದ ಅವಧಿಯಲ್ಲಿ ಕುಟುಂಬದವರಿಗಿಂತ ಶಿಕ್ಷಕರೊಂದಿಗೆ ಹೆಚ್ಚಿನ ಸಮಯವನ್ನು ಕಳೆದಿದ್ದರು” ಎಂದು ಸ್ಮರಿಸಿದರು. ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯು ರೂ. 5,000 ನಗದು ಬಹುಮಾನ, ಶಾಲು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿತ್ತು.
ಶಿಕ್ಷಕರಿಗೆ ನೀಡಲಾಗುತ್ತಿರುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯು ಇತರ ಶಿಕ್ಷಕರಿಗೂ ಹೆಚ್ಚಿನ ಪರಿಶ್ರಮದಿಂದ ಕಾರ್ಯನಿರ್ವಹಿಸಿ ಸಂಘ ಹಾಗೂ ಇತರ ಸಂಸ್ಥೆಗಳಿಂದ ಉನ್ನತ ಗೌರವಗಳನ್ನು ಪಡೆಯಲು ಪ್ರೇರಣೆಯಾಗಬೇಕು ಎಂದು ಡಾ. ಅವ್ವಾಜಿ ಹೇಳಿದರು. ತಮ್ಮ ತಮ್ಮ ಶಾಲೆಗಳು, ಕಾಲೇಜುಗಳು ಹಾಗೂ ಶರಣಬಸವ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳನ್ನು ಗುಣಮಟ್ಟದ ಹಾಗೂ ಸಮರ್ಪಣಾ ಮನೋಭಾವದ ಸೇವೆಯ ಮೂಲಕ ಹೊಸ ಎತ್ತರಕ್ಕೆ ಕೊಂಡೊಯ್ಯುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಕೇವಲ ಶೈಕ್ಷಣಿಕವಾಗಿ ಸಬಲ ವ್ಯಕ್ತಿಗಳನ್ನಾಗಿ ರೂಪಿಸುವುದμÉ್ಟೀ ಅಲ್ಲದೆ, ಜವಾಬ್ದಾರಿಯುತ ನಾಗರಿಕರನ್ನಾಗಿ ಬೆಳೆಸಿ, ರಾಷ್ಟ್ರ ನಿರ್ಮಾಣದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದು ಅವ್ವಾಜಿ ಕರೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪೆÇ್ರ. ಶರಣಪ್ಪ ಹಲ್ಸೆ ಅವರು ಮಾತನಾಡಿ, ತಾವು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಹಳೆಯ ವಿದ್ಯಾರ್ಥಿಯಾಗಿದ್ದು, ತಮ್ಮ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಸೈನ್ಸ್ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಪೂಜ್ಯ ಡಾ. ಅಪ್ಪಾಜಿಯವರಿಂದ ಎರಡು ಬಾರಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸುವ ಗೌರವ ತಮಗೆ ದೊರೆತಿತ್ತು ಎಂದು ಸ್ಮರಿಸಿದರು. “ಡಾ. ಅಪ್ಪಾಜಿಯವರ ಕಟ್ಟುನಿಟ್ಟಿನ ಮಾರ್ಗದರ್ಶನದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ ಅನುಭವವೇ ನನ್ನ ವೃತ್ತಿಪರ ಬೆಳವಣಿಗೆಗೆ ಕಾರಣವಾಯಿತು. ಅದೇ ಅನುಭವದ ಬಲದಿಂದ ಎರಡು ವಿಶ್ವವಿದ್ಯಾಲಯಗಳ ಉಪಕುಲಪತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಲು ಸಾಧ್ಯವಾಯಿತು” ಎಂದು ಹೇಳಿದರು.
ಪೂಜ್ಯ ಡಾ. ಅಪ್ಪಾಜಿಯವರು ಸಂಸ್ಥೆಗೆ ಆಸ್ತಿಯಾಗಬಲ್ಲ ಪ್ರತಿಭಾವಂತ ಶಿಕ್ಷಕರನ್ನು ಗುರುತಿಸುವ ವಿಶೇಷ ಸಾಮಥ್ರ್ಯ ಹೊಂದಿದ್ದರು. ಡಾ. ಅಪ್ಪಾಜಿಯವರಿಂದ ಶಿಕ್ಷಕರಾಗಿ ಆಯ್ಕೆಯಾದವರು, ಸದಾ ಅತ್ಯುತ್ತಮ ಶಿಕ್ಷಕರಾಗಿ ಹೊರಹೊಮ್ಮಿದ್ದು, ಈ ಭಾಗದ ಶೈಕ್ಷಣಿಕವಾಗಿ ಹಿಂದುಳಿದ ವರ್ಗಕ್ಕೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಪೆÇ್ರ. ಹಲ್ಸೆ ಹೇಳಿದರು
ಪೂಜ್ಯ ಡಾ. ಅಪ್ಪಾಜಿಯವರು ಹಾಕಿಕೊಟ್ಟ ಉತ್ತಮ ಪರಂಪರೆಯನ್ನು ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿಯವರು ಮುಂದುವರಿಸಿಕೊಂಡು ಹೋಗುತ್ತಿರುವುದನ್ನು ಶ್ಲಾಘಿಸಿದ ಅವರು, ಶಿಕ್ಷಕರ ಪರಿಶ್ರಮವನ್ನು ಗುರುತಿಸಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸುವುದು ಸಂಸ್ಥೆಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಲು ಪರಿಣಾಮ ಬೀರಲಿದೆ ಎಂದರು. ಶಿಕ್ಷಣದ ವ್ಯಾಪ್ತಿಯನ್ನು ವಿಸ್ತರಿಸುವುದರ ಜೊತೆಗೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಾನದಂಡವನ್ನಾಗಿ ಪ್ರತಿಪಾದಿಸುತ್ತಿರುವ ಡಾ. ಅವ್ವಾಜಿಯವರು, ಡಾ. ಅಪ್ಪಾಜಿಯವರ ಹೆಜ್ಜೆಗುರುತುಗಳನ್ನು ಅನುಸರಿಸುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯಸಭೆಯ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂ ಅವರು ಮಾತನಾಡಿ, ಪೂಜ್ಯ ಡಾ. ಅಪ್ಪಾಜಿಯವರ ಶೈಕ್ಷಣಿಕ ಹಾಗೂ ಸಾಮಾಜಿಕ ಕೊಡುಗೆಗಳನ್ನು ಕೊಂಡಾಡಿದರು. ಮರಾಠಾ ವೀರ ಛತ್ರಪತಿ ಶಿವಾಜಿಯವರ ತಾಯಿ ಜೀಜಾಬಾಯಿಯವರಿಗೆ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿಯವರನ್ನು ಹೋಲಿಸಿದ ಅವರು, ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರನ್ನು ಆಧುನಿಕ ಶಿವಾಜಿಯನ್ನಾಗಿ ರೂಪಿಸುತ್ತಿದ್ದಾರೆ ಎಂದು ಬಣ್ಣಿಸಿದರು. ಸಂಘದ ಪ್ರತಿಯೊಂದು ಶಿಕ್ಷಣ ಸಂಸ್ಥೆಯನ್ನೂ ಗುಣಮಟ್ಟದ ಶಿಕ್ಷಣದ ಕೇಂದ್ರವನ್ನಾಗಿ ಪರಿವರ್ತಿಸುವುದೇ ಡಾ. ಅಪ್ಪಾಜಿಯವರಿಗೆ ಸಲ್ಲಿಸುವ ಅತ್ಯಂತ ಸೂಕ್ತ ಗೌರವವಾಗಲಿದೆ ಎಂದು ಹೇಳಿದರು.
ಕುಮಾರಿ ಶಿವಾನಿ. ಎಸ್. ಅಪ್ಪ ಅವರು ತಮ್ಮ ತಂದೆಯವರಾದ ಪೂಜ್ಯ ಡಾ. ಅಪ್ಪಾಜಿಯವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ ಮಾತನಾಡಿದರು. ಬಳಿಕ ಕುಮಾರಿ ಶಿವಾನಿ ಎಸ್. ಅಪ್ಪ ಅವರು ತಮ್ಮ ಸಹೋದರಿಯರಾದ ಕುಮಾರಿ ಭವಾನಿ ಎಸ್. ಅಪ್ಪ ಹಾಗೂ ಕುಮಾರಿ ಮಹೇಶ್ವರಿ ಎಸ್. ಅಪ್ಪ ಅವರೊಂದಿಗೆ ಪ್ರಾರ್ಥನಾ ಗೀತೆಯನ್ನು ಹಾಡಿದರು. ಮುಗಳನಾಗಾವಿಯ ಕಟ್ಟಿಮನಿ ಸಂಸ್ಥಾನ ಹಿರೇಮಠದ, ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಹಾಗೂ ಕಲಬುರಗಿ ನಗರದ ಶಹಾಬಜಾರ್‍ನ ಚೌಡಾಪುರಿ ಹಿರೇಮಠದ ಡಾ. ರಾಜಶೇಖರ ಶಿವಾಚಾರ್ಯರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರು ಸ್ವಾಗತಿಸಿದರು. ಕಡಗಂಚಿಯ ಶಾಂತಲಿಂಗೇಶ್ವರ ಸಂಸ್ಥಾನ, ಕಟ್ಟಿಮಠದ ಶ್ರೀ ವೀರತಪಸ್ವಿ ವೀರಭದ್ರ ಶಿವಾಚಾರ್ಯರು, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿ¯ಕುಮಾರ ಬಿಡವೆ, ಕುಲಸಚಿವೆ ಡಾ. ಲಕ್ಷ್ಮೀ ಪಾಟೀಲ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ, ಹಣಕಾಸು ಅಧಿಕಾರಿ ಡಾ. ಕಿರಣ ಮಾಕಾ, ಪೆÇ್ರ. ನೀಲಾಂಬಿಕಾ ಶೇರಿಕಾರ ಸೇರಿದಂತೆ ಇನ್ನಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಡಾ. ಸಾರಿಕಾದೇವಿ ಕಾಳಗಿ ವಂದನಾರ್ಪಣೆ ಮಾಡಿದರು.





























