
ಬೆಂಗಳೂರು, ಜೂ.೮- ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ತೀವ್ರ ಹೃದಯಾಘಾತದಿಂದ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸೂರಜ್ ಹೆಗ್ಡೆ ಅವರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂದಿ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸೇರಿದಂತೆ ಇತರ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲೇ ಆಗುತ್ತಿಲ್ಲ. ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ವಿಷಾಧಿಸಿದ್ದಾರೆ.
ಸೂರಜ್ ಹೆಗ್ಡೆ ಅವರು ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದಿದ್ದಾರೆ.
ಸೂರಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷರ ಸಂತಾಪ:
ಎಐಸಿಸಿ ಕಾರ್ಯದರ್ಶಿಯಾಗಿ ಪಕ್ಷಕ್ಕೆ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿದ ಯುವ ನಾಯಕ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನದಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.

ಸೂರಜ್ ನನ್ನ ಕುಟುಂಬಕ್ಕೆ ತುಂಬಾ ಹತ್ತಿರವಾಗಿದ್ದರು. ನಾನು ಅವರನ್ನು ಬಾಲ್ಯದಿಂದಲೂ ಬಲ್ಲೆ. ಅವರು ಬೆಳೆಯುವುದನ್ನು ನೋಡುವುದು ನಿಜಕ್ಕೂ ಹೃದಯಸ್ಪರ್ಶಿಯಾಗಿತ್ತು. ದೇವರಾಜ್ ಅರಸು ಅವರ ಶ್ರೀಮಂತ ಪರಂಪರೆ ಮತ್ತು ಮೌಲ್ಯಗಳನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಮುಂದುವರಿಸಿಕೊಂಡು ಹೋಗುವ ಮೂಲಕ ಸೂರಜ್ ಹೆಗ್ಡೆ ಯುವ ಕಾಂಗ್ರೆಸ್‌ಗೆ ಅಪಾರ ಕೊಡುಗೆಗಳನ್ನು ನೀಡಿದವರು ಎಂದು ಸ್ಮರಿಸಿದ್ದಾರೆ
ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಸಂತಾಪ:
ಸೂರಜ್ ಹೆಗ್ಡೆ ನಿಧನಕ್ಕೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವಿಚಾರಧಾರೆಯಲ್ಲಿ ಅತಿಯಾದ ನಂಬಿಕೆ ಇಟ್ಟಿದ್ದರು. ಯುವ ಕಾಂಗ್ರೆಸ್‌ನಲ್ಲಿದ್ದಾಗ ಅವರು ಯುವ ಭಾರತೀಯರಿಗೆ ಮಾರ್ಗದರ್ಶನ ನೀಡುತ್ತಿದ್ದರು. ಅವರ ನಿಧನ ಕಾಂಗ್ರೆಸ್ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ, ಸ್ನೇಹಿತರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
ಸುರ್ಜೇವಾಲಾ ಸಂತಾಪ:
ನನ್ನ ಆತ್ಮೀಯ ಸ್ನೇಹಿತ ಸೂರಜ್ ಹೆಗ್ಡೆ ನಿಧನ ನಂಬಲಾಗುತ್ತಿಲ್ಲ. ಕಾಂಗ್ರೆಸ್ ವಿಚಾರಧಾರೆಗೆ ಜೀವನ ಮುಡಿಪಾಗಿಟ್ಟ ವ್ಯಕ್ತಿ. ದೇವರಾಜ ಅರಸು ಹಿರಿಮೆಯನ್ನು ಮೈಗೂಡಿಸಿಕೊಂಡಿದ್ದರು. ನಾನು ಅವರನ್ನು ಎರಡು ದಿನಗಳ ಹಿಂದೆ ಭೇಟಿಯಾಗಿದ್ದೆ. ಅವರು ಯಾವುತ್ತೂ ಏನೂ ಚಿಂತೆ ಮಾಡಬೇಡಿ ಎಲ್ಲವೂ ಸರಿ ಹೋಗಲಿದೆ. ನೀವು ನಿಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗಿ ಅಂತ ಹೇಳುತ್ತಿದ್ದರು ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಮರಿಸಿದ್ದಾರೆ.
ಸೂರಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಸಂತಾಪಿಸಿದ್ದಾರೆ.
ಸಿಎಂ ಡಿಕೆಶಿ ಸಂತಾಪ
ಕಾಂಗ್ರಸ್ ಮುಖಂಡ ಸೂರಜ್ ಹಗ್ಡೆ ನಿಧನಕ್ಕೆ ಮುಖ್ಯಮಂತ್ರಿ ಡಿಕೆಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ಪಕ್ಷಸಂಘಟನೆಯಲ್ಲ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು ಎಂದು ಹೇಳಿದರು.
ಸೂರಜ್ ಹೆಗ್ಡೆ ನಿಧನಕ್ಕೆ ಕೆಪಿಸಿಸಿ ಆಧ್ಯಕ್ಷ ಹರಿಪ್ರಸಾದ್ ,ಮಾಜಿ ಸಿಎಂ ಸಿದ್ದರಾಮಯ್ಯ ಸಚಿವರು ,ಮುಖಂಡರು ಕಂಬನಿ ಮಿಡಿದಿದ್ದಾರೆ.

























