
ಕಲಬುರಗಿ,ಏ.28-ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈ ಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಹೈ ಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲ ಏನಿಲ್ಲ. ಸರ್ಕಾರ, ಆಡಳಿತ, ಕಾರ್ಯಕ್ರಮ ಎಲ್ಲವೂ ಸರಿಯಾಗಿ ನಡೆಯುತ್ತಿವೆ. 4 ಲಕ್ಷ ಕೋಟಿ ಬಜೆಟ್ ನೀಡಿದ್ದೇವೆ. ಏನೇ ಗೊಂದಲಗಳಿದ್ದರು ಅದನ್ನು ಹೈಕಮಾಂಡ್ ಬಗೆ ಹರಿಸುತ್ತದೆ. ಎಲ್ಲದಕ್ಕೂ ಆದಷ್ಟು ಶೀಘ್ರದಲ್ಲಿ ಪರಿಹಾರ ಸಿಗಲಿದೆ ಎಂದರು.
ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಂಡರೆ ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.





















