
ವಿಜಯಪುರ :ನ.೨೩: ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಎಸ್.ಪಿ. ಶೇಗುಣಸಿ ಅವರು ಶಿಕ್ಷಣ ಶಾಸ್ತ್ರ ವಿಷಯದಲ್ಲಿ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ(ಏSಇಖಿ) ಪದವಿಯನ್ನು ಪಡೆದುಕೊಂಡಿದ್ದಾರೆ.
ಇವರು ಈ ಮುಂಚೆ ಕನ್ನಡ ವಿಷಯದಲ್ಲಿ ಏSಇಖಿ ಪದವಿಯನ್ನು ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ “ಕರ್ನಾಟಕ- ಮಹಾರಾಷ್ಟ್ರ ಗಡಿನಾಡ ಕನ್ನಡಪರ ಹೋರಾಟಗಳು” ಎಂಬ ಮಹಾಪ್ರಬಂಧವನ್ನು ಸಲ್ಲಿಸಿ ಪಿಎಚ್.ಡಿ. ಪದವಿಯನ್ನು ಪಡೆದುಕೊಂಡಿರುತ್ತಾರೆ.
ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷರು, ಆಡಳಿತ ಅಧಿಕಾರಿಗಳು, ಮಹಾವಿದ್ಯಾಲಯದ ಪ್ರಾಚಾರ್ಯರು, ಸಮಸ್ತ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

























