
ಕಲಬುರ್ಗಿ:ಅ.25: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕಿ ಸರೋಜಾದೇವಿ ಪಾಟೀಲ್ ಅವರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು, ಅಂತಾರಾಷ್ಟ್ರೀಯ ಶಿಕ್ಷಕರ ದಿನಾಚರಣೆ ನಿಮಿತ್ತ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ರತ್ನ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ರವಿವಾರ ದಿನಾಂಕ 26 ಅಕ್ಟೋಬರ್ 2025 ರಂದು ಬೆಂಗಳೂರಿನ ಕೆ ಆರ್ ಸರ್ಕಲ್ ಹತ್ತಿರ ಇರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ಜರುಗಲಿದೆ.
ಈ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯವನ್ನು ವಿಜಯಪುರ ವನಶ್ರೀ ಮಠದ ಪರಮಪೂಜ್ಯ ಜಗದ್ಗುರು ಡಾ ಜಯಬಸವ ಮಹಾಸ್ವಾಮಿಗಳು ವಹಿಸಲಿದ್ದಾರೆ. ಮಾನ್ಯ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ ಸಚಿವರಾದ ಸನ್ಮಾನ್ಯ ಎನ್ ಎಸ್ ಬೋಸರಾಜು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ ದಿನೇಶ್ ಗುಂಡೂರಾವ್ ವಹಿಸಿಕೊಳ್ಳಲಿದ್ದಾರೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಶಶೀಲ್ ಜಿ ನಮೋಶಿ, ಎಸ್ ವಿ ಸಂಕನೂರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಪ್ರಾಚಾರ್ಯರಾದ ಡಾ ಬಿ ಸಿ ನಾಗೇಂದ್ರ ಕುಮಾರ್ ವಹಿಸಿಕೊಳ್ಳಲಿದ್ದಾರೆ.
ರಾಜ್ಯ ಮಟ್ಟದ ಈ ಪ್ರಶಸ್ತಿ ಪಡೆದ ಉಪನ್ಯಾಸಕಿ ಸರೋಜಾದೇವಿ ಪಾಟೀಲ್ ರವರಿಗೆ ಹೈ ಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಕಾಲೇಜಿನ ಸಂಚಾಲಕರಾದ ನಾಗಣ್ಣ ಘಂಟಿ, ಅನಿಲಕುಮಾರ ಮರಗೋಳ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಡಾ ಮೋಹನ್ ರಾಜ್ ಪತ್ತಾರ ಹಾಗೂ ಎಲ್ಲ ಸಿಬ್ಬಂದಿ ಅಭಿನಂದಿಸಿದ್ದಾರೆ.





























