Home ಜಿಲ್ಲೆ ಕಲಬುರಗಿ ಉಪನ್ಯಾಸಕರು ನಿರಂತರ ಅಧ್ಯಯನಶೀಲರಾಗಿರಬೇಕು: ದೇವಣಗೌಡ ಪಾಟೀಲ

ಉಪನ್ಯಾಸಕರು ನಿರಂತರ ಅಧ್ಯಯನಶೀಲರಾಗಿರಬೇಕು: ದೇವಣಗೌಡ ಪಾಟೀಲ

ಕಲಬುರಗಿ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಉಪನ್ಯಾಸಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಉತ್ತಮ ಭವಿಷ್ಯದ ದೃಷ್ಟಿಯಿಂದ ಉಪನ್ಯಾಸಕರು ನಿರಂತರ ಅಧ್ಯಯನಶೀಲರಾಗಿರಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ದೇವಣಗೌಡ ಪಾಟೀಲ ಹೇಳಿದರು.
ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಜಿಲ್ಲಾ ಘಟಕ ಕಲಬುರಗಿ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಉಪನ್ಯಾಸಕರ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪದವಿ ಪೂರ್ವ ಶಿಕ್ಷಣದ ಹಂತವು ವಿದ್ಯಾರ್ಥಿಗಳ ಜೀವನ ರೂಪಿಸಿಕೊಳ್ಳುವಲ್ಲಿ ಅತ್ಯಂತ ಪ್ರಮುಖ ಘಟ್ಟವಾಗಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಸಾಮಥ್ರ್ಯವನ್ನು ಗುರುತಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಪರೀಕ್ಷೆಗೆ ಸನ್ನದ್ಧಗೊಳಿಸುವ ಗುರುತರ ಜವಾಬ್ದಾರಿ ಉಪನ್ಯಾಸಕರ ಮೇಲಿದೆ ಎಂದರು.
ಕಲಬುರಗಿ ವಿಭಾಗದ ಪಿಯುಸಿ ಫಲಿತಾಂಶವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಅರುಣಕುಮಾರ ಪಾಟೀಲ ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು ಮಾತನಾಡಿ
ವಯೋನಿವೃತ್ತಿ ಹೊಂದುತ್ತಿರುವ ಉಪನ್ಯಾಸಕರು ತಮ್ಮ ಸುದೀರ್ಘ ಸೇವಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ, ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಸೇವಾ ಅನುಭವ ಇಂದಿನ ಪೀಳಿಗೆಯ ಉಪನ್ಯಾಸಕರಿಗೆ ಮಾದರಿಯಾಗಿದೆ. ನಿವೃತ್ತರಾಗುತ್ತಿರುವ ಉಪನ್ಯಾಸಕರ ಅನುಭವ ಹಾಗೂ ಮಾರ್ಗದರ್ಶನವನ್ನು ಮುಂದಿನ ಪೀಳಿಗೆ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಎನ್.ಟಿ. ರಂಗೋಲಿ ವಹಿಸಿದ್ದರು.
, ಡಾ. ಶರಣಗೌಡ ಪಾಟೀಲ, ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಧರ್ಮರಾಯ ಜವಳಿ, ಡಾ. ಸಿಲ್ವಿ ಎ. ದೇಶಮಾನೆ, ಮಲ್ಲಿಕಾರ್ಜುನ ಆನಂದಕರ ಹಾಗೂ ಶಿವರಾಜ ನಂದಗಾಂವ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಗುಂಡಯ್ಯ ಸ್ವಾಮಿ, ಡಾ. ಭಗವಂತರಾಯ ಬಳ್ಳುಂಡಗಿ, ನಾಗರಾಜ ಮೈಲ್ವಾರ, ಸವಿತಾ ಬಿ. ನಾಸಿ, ಪಾಂಡು ಎಲ್. ರಾಠೋಡ್, ಶರಣು ಓಂಕಾರ, ನರಸಿಂಗರಾವ ಆರ್. ಕುಲಕರ್ಣಿ ಹಾಗೂ ಸಿದ್ದಲಿಂಗ ಬಿ. ಪೂಜಾರಿ ಉಪಸ್ಥಿತರಿದ್ದರು.
ವಿವಿಧ ತಾಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಾದ ಉದಯಕುಮಾರ ಎಸ್., ಮುತ್ತಣ್ಣ ಎಲ್. ಬೇರೂಟಿ, ಡಾ. ಸುನೀಲಕುಮಾರ ಎಂ.ಎಸ್., ಡಾ. ಮಲ್ಲಿಕಾರ್ಜುನ ಪಾಲಮೂರ, ಪಂಡರೀನಾಥ ಕ್ಷೀರಸಾಗರ, ಸುರೇಶ ನಾಗೂರ, ಶಶಿಕಾಂತ ಮೇತ್ರಿ, ಡಾ. ದೇವೇಂದ್ರ ಗೂಡುರ ಹಾಗೂ ಶ್ರೀಮತಿ ಸುಮಂಗಲಾ ಜಿ. ಸಂಗಾವಿ ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕರ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಸವಿತಾ ಬಿ. ನಾಸಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ವಯೋನಿವೃತ್ತಿ ಹೊಂದುತ್ತಿರುವ ಉಪನ್ಯಾಸಕರನ್ನು ಸಂಘದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಅಲ್ಲದೆ, ವಿವಿಧ ಸಂಘ-ಸಂಸ್ಥೆಗಳಿಂದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕರನ್ನು ಸಹ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.