
ಬಾದಾಮಿ,ನ28: ಪಟ್ಟಣದ ಎಸ್.ಬಿ.ಸಿ.ಬಾಲಕೀಯರ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಎಸ್.ಬಿ.ಸಿ.ಬಾಲಕೀಯರ ಪ್ರೌಢಶಾಲೆ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಿರಿಯ ದಿವಾಣಿ ನ್ಯಾಯಾಧೀಶ ಚಂದ್ರಶೇಖರ ಬಣಕಾರ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆ ನಿಮಿತ್ತ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಎಚ್.ಹಳಗೇರಿ, ತಾಲೂಕಾ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಕಲಾಲ, ಕಾರ್ಯದರ್ಶಿ ಯೋಗೇಶ ತೊಗರಿ ಹಾಜರಿದ್ದರು. ನ್ಯಾಯವಾದಿ ಜೆ.ಐ.ಮಠಪತಿ ಇವರು ಸಂವಿಧಾನ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು. ಮುಖ್ಯಶಿಕ್ಷಕ ಜೆ.ಎಸ್.ಮಿಟ್ಟಲಕೋಡ ಹಾಜರಿದ್ದರು.

























