
ಧಾರವಾಡ, ಜೂ೧೬: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಶ್ರೀಮತಿ ವಿದ್ಯಾ ಪಿ ಹಂಚಿನಮನಿ, ಪದವಿ ಪೂರ್ವ ವಿಜ್ಞಾನ ಕಾಲೇಜು, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಪೊಕ್ಸೊ ಕಾಯಿದೆ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ಶ್ರೀಮತಿ ವಿದ್ಯಾ ಪಿ ಹಂಚಿನಮನಿ, ಪದವಿ ಪೂರ್ವ ವಿಜ್ಞಾನ ಕಾಲೇಜು, ಧಾರವಾಡ ಇಲ್ಲಿ ನಡೆಯಿತು.
ಉದ್ಘಾಟನೆಯನ್ನು ಎನ್.ವಿ.ವಿಜಯ, ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಂiÀÆಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ಇವರು ಸಸಿಗೆ ನೀರು ಹಾಕುವುದರ ಮೂಲಕ ನೆರವೇರಿಸಿದರು. ಮಾದಕ ದ್ರವ್ಯ ವ್ಯಸನದಿಂದ ಇಂದಿನ ಯುವಕರ ಮೇಲೆ ಉಂಟಾಗುವ ದುಷ್ಪರಿಣಾಮದ ಕುರಿತು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಎಚ್. ಶಶಿಧರ ಶೆಟ್ಟಿ, ಗೌರವಾನ್ವಿತ ಜಿಲ್ಲಾ ನ್ಯಾಂiÀÆಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರು ಭಾಗವಹಿಸಿ ಪೊಕ್ಸೋ ಕಾಯಿದೆಯ ಕುರಿತು ಮಾತನಾಡಿದರು. ಅಲ್ಲಪ್ಪ ಎಂ ಬಡಿಗೇರ, ಹಿರಿಯ ಸಿವಿಲ್ ನ್ಯಾಂiÀÆಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ಹಾಗೂ ಉಮೇಶ ಬೊಮ್ಮಕ್ಕನವರ, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವರು ಮುಖ್ಯ ಅತಿಥಿಗಳಾಗಿ ಹಾಜರಿದ್ದರು. ಅಧ್ಯಕ್ಷತೆಯನ್ನು ರಾಜು ಎಸ್ ಕಡೆಮನಿ, ಪ್ರಾಂಶುಪಾಲರು, ವಿ.ಪಿ.ಎಚ್ ಪಿಯು ಕಾಲೇಜು, ಧಾರವಾಡ ಇವರು ವಹಿಸಿದ್ದರು.
ಬಾಲಸುಬ್ರಹ್ಮಣ್ಯ, ಸಾರ್ವಜನಿಕ ಸಂಪರ್ಕ ಅಧಿಕಾರಿಗಳು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಕಾಲೇಜಿನ ಪ್ರಾಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



























