ಅಂಜನಾಪುರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಬೆಂಗಳೂರು, ಫೆ.೧೦ : ಬೆಂಗಳೂರಿನ ಕೆಲವೆಡೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಮತ್ತೆ ಭೀತಿ ಹುಟ್ಟಿಸಿದೆ. ನಗರದ ಅಂಜನಾಪುರದಲ್ಲಿ ಮೂರನೇ ಬಾರಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅಂಜನಾಪುರದ ಫೈವ್ ಜಿ ಬ್ಲಾಕ್ ನಲ್ಲಿ ಮೂರನೇ ಬಾರಿ ಚಿರತೆ ಕಾಣಿಸಿಕೊಂಡಿದೆ.

ಈ ಹಿಂದೆ ಫೆಬ್ರವರಿ ೩ ಮತ್ತು ೬ರಂದು ಇದೇ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು.


ಸಂದೀಪ್ ಎಂಬುವವರ ಮನೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಡರಾತ್ರಿ ಚಿರತೆ ಕಂಡು ನಿವಾಸಿಗಳು ಭಯಭೀತರಾಗಿದ್ದಾರೆ. ಮನೆಯಿಂದ ಹೊರಗಡೆ ಬರುವುದಕ್ಕೂ ನಿವಾಸಿಗಳು ಈಗ ಭಯಪಡುತ್ತಿದ್ದಾರೆ. ಈ ಹಿಂದೆಯೂ ಕೂಡ ಇದೇ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈಗ ಮೂರನೇ ಬಾರಿ ಚಿರತೆ ಕಾಣಿಸಿಕೊಂಡಿದೆ. ಅದರ ಒಡಾಟ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಸ್ಥಳೀಯ ನಿವಾಸಿಗಳು ಆದಷ್ಟು ಬೇಗ ಚಿರತೆಯನ್ನು ಸೆರೆ ಹಿಡಿಯುವಂತೆ ಎಂದು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.