
ಧಾರವಾಡ,ಮೇ.೨೭:
ಗ್ಯಾರಂಟಿ’ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಅರವಿಂದ ಏಗನಗೌಡರ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
`ಗ್ಯಾರಂಟಿ’ ಯೋಜನೆಗಳಿಂದ ಸಾಕಷ್ಟು ಬಡಜನರಿಗೆ ಅನುಕೂಲ ಆಗಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳು ದೂರವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಗೃಹಲಕ್ಷಿö್ಮÃ ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ತಾಲ್ಲೂಕಿನಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ಸೂಚನೆ ನೀಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ವಿರ್ವಾಹಣಾಧಿಕಾರಿ ಗಂಗಾಧರ ಕಂದಕೂರ, ಗ್ಯಾರಂಟಿ ಯೋಜನೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮಿತಿ ಸದಸ್ಯರು ಇದ್ದರು.