
ಕಲಬುರಗಿ:ಜೂ.2: ವಿದ್ಯಾರ್ಥಿಗಳು ಅಂಕಗಳ ದೃಷ್ಟಿಯಿಂದ ಅಧ್ಯಯನ ಮಾಡದರೆ ಸಾಲದು. ಜೊತೆಗೆ ಜ್ಞಾನವನ್ನು ಭವಿಷ್ಯದ ದೃಷ್ಟಿಯಿಂದ ಮನನ ಮಾಡಿಕೊಳ್ಳಬೇಕು. ಬಾಲ್ಯದಲ್ಲಿಯೇ ಗುರಿಯನ್ನು ನಿರ್ಧರಿಸಿ, ಅದಕ್ಕೆ ತಕ್ಕಂತೆ ನಿರಂತರವಾಗಿ ಅಧ್ಯಯನ ಮಾಡುವ, ಹೊಸ-ಹೊಷ ವಿಷಯವನ್ನು ಕಲಿಯುವ ಕುತೋಹಲದ ಜ್ಞಾನದ ಹಸಿವು ನಿಮ್ಮನ್ನು ಜೀವನದಲ್ಲಿ ದೊಡ್ಡ ಮಟ್ಟಕ್ಕೇರಿಸಿ, ಸಾಧಕ ವ್ಯಕ್ತಿಗಳನ್ನಾಗಿ ಮಾಡುತ್ತದೆ. ಜ್ಞಾನದ ಜೊತೆಗೆ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ಮೈಗೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಮಾಜಿ ಯೋಧ ರೇಣುಕಾಚಾರ್ಯ ಸ್ಥಾವರಮಠ ಹೇಳಿದರು.
ನಗರದ ಆಳಂದ ರಸ್ತೆಯ ದೇವಿ ನಗರದಲ್ಲಿನ ‘ಶಿವಾ ಟ್ಯುಟೋರಿಯಲ್ಸ್‍ನ ತೃತೀಯ ವರ್ಷದ ತರಗತಿ ಪ್ರಾರಂಭೋತ್ಸವ’ ಕಾರ್ಯಕ್ರಮಕ್ಕೆ ಸೋಮವಾರ ಸಂಜೆ ಸರಸ್ವತಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತವಾದರೆ ನಿಮ್ಮ ವ್ಯಕ್ತಿತ್ವ ವಿಕಸನವಾಗುವುದಿಲ್ಲ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡಾ ಭಾಗವಹಿಸಬೇಕು. ಗುರು-ಹಿರಿಯರನ್ನು ಗೌರವಿಸುವ, ಪರಸ್ಪರ ಪ್ರೀತಿ, ಸ್ನೇಹ, ಸಹಬಾಳ್ವೆಯಿಂದ ಜೀವನ ಸಾಗಿಸುವ, ಸಕಾರಾತ್ಮಕವಾದ ಚಿಂತನೆ ಗುಣಗಳು ಅಳವಡಿಸಿಕೊಳ್ಳಬೇಕು. ಸಾಧನೆಗೆ ಅಸಾಧ್ಯವಾದದ್ದು ಯಾವುದು ಇಲ್ಲ. ಸಾಧಿಸುವ ಛಲಗಾರಿಕೆ ನಿಮ್ಮದಾಗಬೇಕು. ಕಕ ಭಾಗದ ವಿದ್ಯಾರ್ಥಿಗಳು ಕೀಳರಿಮೆ ತೊಡೆದು ಉನ್ನತವಾದ ಸಾಧನೆಯನ್ನು ಮಾಡುವ ಮೂಲಕ ನಮ್ಮ ಭಾಗದ ಕೀರ್ತಿಯನ್ನು ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಚ್.ಬಿ.ಪಾಟೀಲ್, ಕಸಾಪ ಉತ್ತರ ವಲಯದ ಅಧ್ಯಕ್ಷ ಪ್ರಭುಲಿಂಗ ಮುಲಗೆ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿಯರಾದ ಶಿವಾಂಜಲಿ, ಸುμÁ್ಮ, ಶಿವದೀಕ್ಷಾ ಹಾಗೂ ವಿದ್ಯಾರ್ಥಿಗಳು ಇದ್ದರು.


























