ನಶಾ ಮುಕ್ತ ಭಾರತ ಅಭಿಯಾನಕ್ಕೆ ಎಲ್ಲರೂಕೈಜೋಡಿಸೋಣ: ಅಬಕಾರಿ ಡಿಸಿ ರವಿಶಂಕರ

ಬೀದರ, ನ.೧೯: ನಶಾ ಮುಕ್ತ ಭಾರತ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಅಬಕಾರಿ ಇಲಾಖೆಯ ಡಿಸಿ ರವಿಶಂಕರ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ನಶಾ ಮುಕ್ತ ಭಾರತ ಅಭಿಯಾನ ೫ನೇ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಪ್ರತಿಜ್ಞೆ ವಿಧಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇಂದಿನ ಯುವ ಜನತೆ ದುಶ್ಚಟಗಳಿಗೆ ಹತ್ತಿರವಾಗುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ದೇಶದಾದ್ಯಂತ ನಶಾ ಮುಕ್ತ ಭಾರತ ಅಭಿಯಾನ ಹಮ್ಮಿಕೊಂಡಿದೆ. ಭಾರತ ಒಂದು ಯುವ ರಾಷ್ಟ್ರವಾಗಿದ್ದು, ರಾಷ್ಟ್ರ ನಿರ್ಮಾಣ ಮತ್ತು ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯವಾಗಿದೆ. ಯುವ ಜನತೆ ಆರೋಗ್ಯ ಮತ್ತು ಸ್ವಾಸ್ಥ್ಯ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದರು.
ಇAದು ಪಂಜಾ???ನ ಅಮೃತಸರನಲ್ಲಿ ಅಧಿಕೃತ ಕಾರ್ಯಕ್ರಮ ನಡೆಯುತ್ತಿದೆ. ಇತ್ತೀಚೆಗೆ ಗುಜರಾತಿನ ಕರಾವಳಿಯಲ್ಲಿ ಬಹು ದೊಡ್ಡ ಮಟ್ಟದಲ್ಲಿ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಯಿತು. ಬೇರೆ ದೇಶಗಳಿಂದ ನಮ್ಮ ದೇಶಕ್ಕೆ ಮಾದಕ ವಸ್ತುಗಳು ಆಮದು ಆಗುತ್ತಿದ್ದು, ಅವುಗಳನ್ನು ತಡೆದು ಭಾರತವನ್ನು ನಶಾ ಮುಕ್ತ ಮಾಡೋಣ ಎಂದರು.
ಜಿಲ್ಲಾ ವಿಕಲಚೇತನ ಕಲ್ಯಾಣಧಿಕಾರಿ ಸುಭಾಷ ರತ್ನಾ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪುನರ್ವಸತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನಶಾ ಮುಕ್ತ ಅಭಿಯಾನದ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಹೆಚ್ಚು ಕಾರ್ಯಕ್ರಮ ಹಾಕಿಕೊಂಡು, ಅರಿವು ಮೂಡಿಸಲಾಗಿದೆ ಎಂದರು.
ಇದೇ ವೇಳೆ ನಶಾ ಮುಕ್ತ ಭಾರತ ಅಭಿಯಾನ ಅಂಗವಾಗಿ ಪ್ರತಿಜ್ಞೆ ವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ ಸುಳ್ಳೊಳ್ಳಿ, ಸರ್ಕಾರಿ ಜುನಿಯರ್ ಕಾಲೇಜು ಅಧ್ಯಾಪಕರು ಮಲ್ಲಿಕಾರ್ಜುನ ಲದ್ದೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.