Home ಜಿಲ್ಲೆ ಮಾ.1 ರಂದು ರೇಣುಕಾಚಾರ್ಯ ಜಯಂತಿ ವಿಜೃಂಭಣೆಯಿಂದ ಆಚರಿಸೋಣ:ಎಡಿಸಿ ಶಿವಾನಂದ ಬಿ.ಕರಾಳೆ

ಮಾ.1 ರಂದು ರೇಣುಕಾಚಾರ್ಯ ಜಯಂತಿ ವಿಜೃಂಭಣೆಯಿಂದ ಆಚರಿಸೋಣ:ಎಡಿಸಿ ಶಿವಾನಂದ ಬಿ.ಕರಾಳೆ

ಬೀದರ, ಫೆ.19: ಮಾರ್ಚ.1 ರಂದು ಜರುಗಲಿರುವ ರೇಣುಕಾಚಾರ್ಯ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ.1 ರಂದು ಜರುಗುವ ರೇಣುಕಾಚಾರ್ಯ ಜಯಂತಿ ಅಂಗವಾಗಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ 9.30 ಗಂಟೆಗೆ ಗಣೇಶ ಮೈದಾನದಿಂದ ಮೆರವಣಿಗೆ ಪ್ರಾರಂಭಗೊಂಡು ಶಿವಾಜಿ ವೃತ್ತ, ಭಗತಸಿಂಗ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಜನರಲ್ ಕರಿಯಪ್ಪ ವೃತ್ತದಿಂದ ಮಾರ್ಗವಾಗಿ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರಕ್ಕೆ ತಲುಪಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.
ಮಾರ್ಚ.1 ರಂದು ಶಾಲಾ ಕಾಲೇಜುಗಳಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಮೆರವಣಿಗೆ ನಡೆಯುವ ಸ್ಥಳಗಳಲ್ಲಿ ಸ್ವಚ್ಚತೆ ಹಾಗೂ ಭಾವಚಿತ್ರ ಮೆರವಣಿಗೆ ವಾಹನಕ್ಕೆ ಅಲಂಕಾರ, ಕುಡಿಯುವ ನೀರಿನ ವ್ಯವಸ್ಥೆ, ಎಲ್ಲಾ ವೃತ್ತಗಳ ಮೇಲೆ ದೀಪಾಲಂಕಾರ ವ್ಯವಸ್ಥೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಮೆರವಣಿಗೆ ಹೋಗುವ ಸ್ಥಳಗಳಲ್ಲಿ ಪೆÇಲೀಸ್ ಇಲಾಖೆ ಬಂದೋಬಸ್ತ ವ್ಯವಸ್ಥೆ ಕಲ್ಪಿಸಬೇಕೆಂದರು.
ಈ ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ, ಡಾ.ರಾಜಶೇಖರ ಶಿವಾಚಾರ್ಯರು, ಸಿದ್ರಾಮಯ್ಯಾ ಸ್ವಾಮಿ, ಶಿವಯ್ಯ ಸ್ವಾಮಿ, ಮಾಹಾಂತೇಶ ಬಿರಾದರ, ಶಿವಕುಮಾರ ಪಾಟೀಲ, ಶಿವಶರಣಪ್ಪಾ ವಾಲಿ, ಮಹೇಶ ಪಾಟೀಲ್, ವಿಜಯಕುಮಾರ ಸೋನಾರೆ ಸೇರಿದಂತೆ ಸಮಾಜದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು