ಕಲಬುರಗಿ:ಅ.22: ಪಾಶ್ಯಾತ್ಯ ಸಂಸ್ಕøತಿಯ ಪ್ರಭಾವದಿಂದಾಗಿ ಹಿರಿಯರಿಗೆ ಗೌರವ ನೀಡುವ, ಆರೈಕೆ ಮಾಡುವ ಕರ್ತವ್ಯ, ಜವಾಬ್ದಾರಿ ಕಡಿಮೆಯಾಗುತ್ತಿರುವದು ವಿಷಾದನೀಯ ಸಂಗತಿ. ವೃದ್ಧಾಶ್ರಮಗಳು ಇದರ ಸಂಕೇತಗಳಾಗಿವೆ. ಸದೃಢ ರಾಷ್ಟ್ರ ನಿರ್ಮಾಣಕ್ಕೆ ಹಿರಿಯರ ಸೂಕ್ತ ಸಲಹೆ, ಮಾರ್ಗದರ್ಶನ ತುಂಬಾ ಅವಶ್ಯಕವಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಹಾಗೂ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು.
ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ಮಂದಿರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡುತ್ತಾ, ಸಮಾಜಕ್ಕೆ ಹಿರಿಯರು ಭಾರವಲ್ಲ. ಅವರು ತಮ್ಮಲ್ಲಿರುವ ಹಿರಿತನದ ಜ್ಞಾನ, ಅನುಭವವನ್ನು ಸಮಾಜಕ್ಕೆ ನೀಡಬೇಕು. ಕಿರಿಯರು ಅವರ ಅನುಭವದ ಮಾತುಗಳನ್ನು ಆಲಿಸಿ ಮುನ್ನಡೆಯಬೇಕು. ಎಂತಹ ಸಂದರ್ಭದಲ್ಲಿಯೂ ವಯೋವೃದ್ಧರನ್ನು ವೃದ್ಧಾಶ್ರಮಕ್ಕೆ ನೂಕುವ ನೀಚ ಬುದ್ಧಿ ಬೇಡ. ಹಿರಿಯರಿಗೆ ಗೌರವ ನೀಡಿ, ಉತ್ತಮ ಆರೈಕೆ, ಆಶ್ರಯ ನೀಡುವ ಭಾರತೀಯ ಶ್ರೇಷ್ಟ ಸಂಸ್ಕøತಿ ಉಳಿಸಿಕೊಂಡು ಹೋಗಬೇಕಾಗಿದೆ ಎಂದು
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ, ಶಿಕ್ಷಕಿಯರಾದ ಕಾಶಮ್ಮ, ಚಂದ್ರಲೇಖಾ, ಪೂರ್ಣಿಮಾ, ವಿದ್ಯಾರ್ಥಿ ಪ್ರತಿನಿಧಿ ಆದಿತ್ಯ ಸಿ. ಗಾರಂಪಳ್ಳಿ ಸೇರಿದಂತೆ ಇನ್ನಿತರರಿದ್ದರು.

























