
ಚಿಕ್ಕಬಳ್ಳಾಪುರ. ಡಿ.೬-ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನ ತತ್ವ ಮತ್ತು ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಪಿ. ಎನ್ . ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ೬೯ನೇ ವರ್ಷದ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಮಲೆ ಹಾಕಿ ಗೌರವ ಸೂಚಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿಶ್ವದಲ್ಲಿಯೇ ಜಾತ್ಯತೀತ ತತ್ವದ ತಳಹದಿಯ ಮೇಲೆ ಶ್ರೇಷ್ಠ ಸಂವಿಧಾನವನ್ನು ನೀಡಿದವರು ಎಂದು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಗುಣಗಾನ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ವೈ ನವೀನ್ ಭಟ್ ಜಿಲ್ಲಾ ಪೊಲೀಸ್ ವಷ್ಠಾಧಿಕಾರಿ ಕುಶಾಲ್ ಚೌಕ್ಸೆ ಅಪರ ಜಿಲ್ಲಾಧಿಕಾರಿ ಭಾಸ್ಕರ್ ಡಿವೈಎಸ್ಪಿ ಶಿವಕುಮಾರ್ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಒಳಗೊಂಡಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಸಂಘಟನೆಗಳ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

































