ಫಲಿತಾಂಶ ಸುಧಾರಣೆಗೆ ಪ್ರಯತ್ನ ಮಾಡೋಣ:ಪಂಡಿತರಾವ ಪವ್ಹಾರ

ಸೈದಾಪುರ:ಡಿ.೧೧:ಜಿಲ್ಲೆಯ ಫಲಿತಾಂಶ ಸುಧಾರಣೆಗೆ ನಾವೆಲ್ಲರೂ ಪ್ರಯತ್ನ ಮಾಡೋಣ ಇದಕ್ಕಾಗಿ ಯೋಜನೆಯನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಕರಾದ ಪಂಡಿತರಾವ ಪವ್ಹಾರ ಅಭಿಪ್ರಾಯಪಟ್ಟರು.
ಪಟ್ಟಣದ ಮಲ್ಹಾರ ಕಾರೆಡ್ಡಿ ಬಸವಂತರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಕಲಾ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿ ಮಾತನಾಡಿದರು. ಶಿಕ್ಷಣ ಇಲಾಖೆ ಇಗಾಗಲೇ ವಿಷಯವಾರು ನೀಲ ನಕ್ಷೆ ಸೇರಿದಂತೆ ವಿವಿಧ ಅನುಕೂಲತೆಗಳನ್ನು ಕಲ್ಪಿಸಿದೆ. ಇದರ ಸರಿಯಾದ ಸದುಪಯೋಗ ಪಡೆದುಕೊಂಡು ಶೈಕ್ಷಣಿಕ ಅಭಿವೃದ್ದಿಗಾಗಿ ಪ್ರಯತ್ನ ಮಾಡಬೇಕಾಗಿದೆ. ಕಾಲೇಜಿಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳ ದಾಖಲಾತಿ ಉತ್ತಮವಾಗಿದ್ದೂ ಇನ್ನೂ ಹೆಚ್ಚಿನ ಶೈಕ್ಷಣಿಕ ಸಾಧನೆ ನಿಮ್ಮದಾಗಲಿ ಎಂದು ಹಾರೈಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಿಬ್ಬಂದಿ ಮನುಪಾಟೀಲ, ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಹಂಪಣ್ಣ ಸಜ್ಜನಶೆಟ್ಟಿ, ದೇವಿಂದ್ರ ಪೀರಾ, ಚಂದ್ರಶೇಖರ ಡೊಣ್ಣೆಗೌಡ, ಬಸವರಾಜ ಭರಮಶೆಟ್ಟಿ, ಶಾಂತಲಾ.ಎನ್, ಇಂದಿರಾ ತೂರೆ, ರಾಜಶೇಖರ ಪಾಟೀಲ, ಅನುರಾಧ ಸೇರಿದಂತೆ ಇತರರಿದ್ದರು.