Home ಜಿಲ್ಲೆ ಕಲಬುರಗಿ ಅಳಿವಿನಂಚಿನ ವನ್ಯಜೀವಿಗಳ ಉಳಿಸುವ ಕಾರ್ಯವಾಗಲಿ

ಅಳಿವಿನಂಚಿನ ವನ್ಯಜೀವಿಗಳ ಉಳಿಸುವ ಕಾರ್ಯವಾಗಲಿ

ಕಲಬುರಗಿ:ಮಾ.6: ಮಾನವ ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ನಾಶಮಾಡಿ ಅಲ್ಲಿನ ಅನೇಕ ವನ್ಯಜೀವಿಗಳನ್ನು ಬೇಟೆಯಾಡಿ ನಾಶಮಾಡುತ್ತಿದ್ದಾನೆ. ಇದರಿಂದ ಕೆಲವು ಸಂತತಿ ನಾಶಹೊಂದಿದ್ದು, ಮತ್ತೆ ಕೆಲವು ಅಳಿವುನಂಚಿನಲ್ಲಿವೆ. ಅರಣ್ಯ ಸಂಪತ್ತು, ಪ್ರಾಣಿ ಸಂಕುಲದ ರಕ್ಷಣೆ ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ.ಪಾಟೀಲ ಹೇಳಿದರು.
ನಗರದ ಖಾದ್ರಿ ಚೌಕ್‍ನಲ್ಲಿನ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ವಿಶ್ವ ವನ್ಯಜೀವಿ ದಿನಾಚರಣೆ’ಯನ್ನು ಉದ್ಘಾಟಿಸಿ, ಅವರು ಮಾತನಾಡುತ್ತಿದ್ದರು.
ಪರಿಸರದ ಜೈವಿಕ ವ್ಯವಸ್ಥೆಯ ಸರಪಣಿಯಲ್ಲಿ ಒಂದು ಯಾವುದೇ ಜೀವಿಯ ಸಂತತಿ ನಾಶವಾದರೆ ಅದರ ನೇರ ಪರಿಣಾಮದ ಪರಿಸರದ ಮೇಲಾಗಿ, ಅಸಮತೋಲನೆಯಾಗುತ್ತದೆ. ಆದ್ದರಿಂದ ಸಸ್ಯ ಸಂಪತ್ತು, ಪ್ರಾಣಿ ಸಂಪತ್ತು, ವನ್ಯ ಜೀವಿಗಳ ಸಂರಕ್ಷಣೆ ಮಾಡುವುದರಿಂದ ಪರಿಸರ ಸಮತೋಲನ ಕಾಪಾಡಲು ಸಾಧ್ಯವಿದೆ. ವನ್ಯಜೀವಿಗಳು ಜೀವ ವೈವಿಧ್ಯತೆಯನ್ನು ಕಾಪಾಡುತ್ತವೆ. ಜೀವಿಗಳ ನಾಶಗಳನ್ನು ತಡೆಗಟ್ಟುತ್ತವೆ. ಪ್ರವಾಸೋದ್ಯಮದ ಮೂಲಕ ಆರ್ಥಿಕ ಬೆಳವಣಿಗೆಯಾಗುತ್ತದೆ. ವನೀಕರಣಕ್ಕೆ ಉತ್ತೇಜನಕಾರಿಯಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕರಾವಿಪ ಗ್ರಾಮೀಣ ಘಟಕದ ಮಾಜಿ ಸಂಚಾಲಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿ ಪೂಜಾ ಹೂಗಾರ, ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.