ಜಿ.ಪಂ. ಸಿಇಒ ರಿಷಿ ಆನಂದಗೆ ಪ್ರಶಂಸನಾ ಪತ್ರ

ವಿಜಯಪುರ,ಜೂ.28:ಜಿಲ್ಲೆಯಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳಾದ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ ಎಸ್‍ಎಚ್‍ಸಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‍ಕೆವಿವೈ) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ರಾಷ್ಟ್ರೀಯ ತೋಟಗಾರಿಕಾ ಮಿಷನ್ ಎನ್‍ಎಚ್‍ಎಂ ಯೋಜನೆಗಳನ್ನು ಅತ್ಯುತ್ತಮವಾಗಿ ಅನುಷ್ಟಾನಗೊಳಿಸರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರಿಗೆ ಪ್ರಶಂಸನಾ ಪತ್ರ ಲಭಿಸಿದೆ.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ವಿಜಯಪುರ ಜಿಲ್ಲೆಯಲ್ಲಿ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ (ಎಸ್‍ಎಚ್‍ಸಿ), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಆರ್‍ಕೆವಿವೈ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ಮತ್ತು ರಾಷ್ಟ್ರೀಯ ತೋಟಗಾರಿಕಾ ಮಿಷನ್, ಯೋಜನೆಗಳ ಅನುμÁ್ಠನದಲ್ಲಿ ಗಣನೀಯ ಪ್ರಗತಿ ಸಾಧಿಸಿರುವುದನ್ನು ಗಮನಿಸಿ ಸಂಬಂಧಿಸಿದ ಸಾಧನೆ ಮಾಡಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಲು ತಿಳಿಸಿದ್ದಾರೆ. ಈ ಉತ್ತಮ ಪ್ರಗತಿಯನ್ನು ಸಾಧಿಸಲು ಇಲಾಖಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿಗಳ ಅಚಲವಾದ ಬದ್ಧತೆ, ನಿರಂತರ ಶ್ರಮ ಹಾಗೂ ಸಮನ್ವಯದ ಕಾರ್ಯಪದ್ಧತಿಗೆ ಶ್ಲಾಘನೆ ಸಲ್ಲಬೇಕು. ನಿಮ್ಮ ತಂಡದ ಈ ಉತ್ಸಾಹ ಹಾಗೂ ಕಠಿಣ ಪರಿಶ್ರಮವೇ ಇಂತಹ ಯಶಸ್ಸಿಗೆ ನಾಂದಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಪ್ರಶಂಸನಾ ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿಯೂ ಇಂತಹುದೇ ಉತ್ಸಾಹದಿಂದ ಕಾರ್ಯ ನಿರ್ವಹಣೆಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರಗತಿ ಪಥದಲ್ಲಿ ಜಿಲ್ಲೆಯ ಸಾಧನೆ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.
ಈ ವಿಶೇಷ ಸಾಧನೆಗಾಗಿ ಜಿ.ಪಂ ಸಿಇಒ ರಿಷಿ ಆನಂದ ಅವರು, ಈ ಉತ್ತಮ ಪ್ರಗತಿಯನ್ನು ಸಾಧಿಸಲು ಮತ್ತು ಗಮನಾರ್ಹ ಪ್ರಗತಿ ಸಾಧಿಸಲು ಕಾರಣವಾದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಠಿಣ ಪರಿಶ್ರಮ ಮತ್ತು ಸಹಕಾರಕ್ಕಾಗಿ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮೆಚ್ಚುಗೆ ನಿಮ್ಮೆಲ್ಲರಿಗೂ ಸಲ್ಲುತ್ತದೆ. ಆದ್ದರಿಂದ, ನಿಮ್ಮೆಲ್ಲರಿಗೂ ಅಭಿನಂದನೆಗಳು ಮತ್ತು ಜಿಲ್ಲೆಯ ಮತ್ತಷ್ಟು ಅಭಿವೃದ್ಧಿ ಮತ್ತು ಪ್ರಗತಿಗೆ ಶುಭಾಶಯಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿಶೇಷ ಸಾಧನೆಗಾಗಿ ಜಿ.ಪಂ ಸಿಇಓ ರಿಷಿ ಆನಂದ ಅವರು, ಈ ಉತ್ತಮ ಪ್ರಗತಿಯನ್ನು ಸಾಧಿಸಲು ಮತ್ತು ಗಮನಾರ್ಹ ಪ್ರಗತಿ ಸಾಧಿಸಲು ಕಾರಣವಾದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಠಿಣ ಪರಿಶ್ರಮ ಮತ್ತು ಸಹಕಾರಕ್ಕಾಗಿ ನಾನು ಹೃತೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮೆಚ್ಚುಗೆ ನಿಮ್ಮೆಲ್ಲರಿಗೂ ಸಲ್ಲುತ್ತದೆ. ಆದ್ದರಿಂದ, ನಿಮ್ಮೆಲ್ಲರಿಗೂ ಅಭಿನಂದನೆಗಳು ಮತ್ತು ಜಿಲ್ಲೆಯ ಮತ್ತಷ್ಟು ಅಭಿವೃದ್ಧಿ ಮತ್ತು ಪ್ರಗತಿಗೆ ಶುಭಾಶಯಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.