ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಕ್ಕೆ ಪತ್ರ: ಸ್ವಾಗತಾರ್ಹ

ಕಲಬುರಗಿ,ಅ.೧೫-ಜಿಲ್ಲಾ ಉಸ್ತುವರಿ ಸಚಿವರಾದ ಪ್ರಿಯಂಕ್ ಖರ್ಗೆಯವರು ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕು ಎಂದು ಮುಖ್ಯ ಮಂತ್ರಿಗಳಿಗೆ ಪತ್ರ ಬರೆದಿರುವುದು ಸ್ವಾಗತಾರ್ಹವಾಗಿದೆ ಎಂದು ದಲಿತ ಯುವ ಮುಖಂಡ ಸಿದ್ಧಾರ್ಥ ಮೇಲಿನಕೇರಿ ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಡೆಸುವುದು ಸರಿಯಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಪಥಸಂಚಲನ ಮಾಡುವುದು ಹಾಗೂ ಕೆಲವೊಂದು ಘೋಷಣೆ ಕುಗುವಂತದ್ದು ಇಂತಹ ಚಟುವಟಿಕೆಗಳಿಂದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವಂತ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಲು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ಸೂಕ್ತವಾಗಿದೆ ಎಂದು ಅವರು ತಿಳಿಸಿದ್ದಾರೆ.