ಯೂರಿಯಾ ಗೊಬ್ಬರ ಅನಧಿಕೃತವಾಗಿ ಸಂಗ್ರಹ ಮಾಡಿದ್ದರೆ ಲೈಸೆನ್ಸ್ ರದ್ದು:ಎಸಿ ಗುರುನಾಥ ದಡ್ಡೆ

ಕೊಲ್ಹಾರ:ಅ.೨೮: ಹೋರಾಟದಲ್ಲಿ ರೈತರನ್ನು ಉದ್ದೇಶಿಸಿ ವಿಜಯಪುರ ಎ ಸಿ ಗುರುನಾಥ ದಡ್ಡೆ ಮಾತನಾಡಿ ರೈತರಿಗೆ ಗೊಬ್ಬರ ಅಂಗಡಿ ಮಾಲೀಕರು ಯೂರಿಯಾ ಗೊಬ್ಬರವನ್ನು ಸಕಾಲದಲ್ಲಿ ನೀಡಬೇಕು ನೀಡಿದೆ ಸಂಗ್ರಹಿಸಿದ್ದರೆ ಅಂತಹ ಅಂಗಡಿ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಮತ್ತು ಈ ಭಾಗದ ರೈತರ ಬೆಳೆಗಳಿಗೆ ಬೆಳೆಹಾನಿ ಪರಿಹಾರ ಶೀಘ್ರದಲ್ಲೇ ವರದಿ ಪಡೆದು ಪರಿಹರಿಸುತ್ತೇವೆ ಎಂದು ಹೇಳಿದರು.
ಬಳೂತಿ ಗ್ರಾಮದಲ್ಲಿ ಆಶ್ರಯ ಯೋಜನೆಯಲ್ಲಿ ಮನೆ ನಿರ್ಮಾಣವಾದರು ಹಕ್ಕುಪತ್ರ ವಿತರಣೆ ಹಾಗೂ ಹಳ್ಳದ ಗೆಣ್ಣೂರ ಗ್ರಾಮದಲ್ಲಿನ ಸಾರ್ವಜನಿಕ ಸ್ಥಳಗಳ ಸಮಸ್ಯೆ ಎಲ್ಲವನ್ನೂ ಮಾಹಿತಿ ಪಡೆದು ತಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೋರಾಟಗಾರರಿಗೆ ಹೇಳಿದರು.
ಹೋರಾಟ ಸ್ಥಳಕ್ಕೆ ಆಗಮಿಸಿದ ಕೊಲ್ಹಾರ ದಿಗಂಬರೇಶ್ವರ ಮಠದ ಶ್ರೀ ಕಲ್ಲಿನಾಥ ದೇವರು ಮಾತನಾಡಿ ರೈತರಿಗೆ ಸರಿಯಾದ ಸಮಯಕ್ಕೆ ಗೊಬ್ಬರ ಹಾಗೂ ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕರೆ ಸರ್ಕಾರಕ್ಕೆ ಸಾಲ ಕೊಡಬಲ್ಲ ರೈತ ಆದರೆ ಇಂದು ರೈತ ತನ್ನ ಗೊಬ್ಬರ ಪಡೆಯಲು ಹೋರಾಟ ಮಾಡಿ ಪಡೆಯುವ ದುಸ್ಥಿತಿ ಬಂದಿದೆ ಎಂದು ಹೇಳಿದರು.
ಪಟ್ಟಣದ ಮುಖಂಡ ಟಿ ಟಿ ಹಗೇದಾಳ ಮಾತನಾಡಿ ರಾಜ್ಯದಲ್ಲಿ ಅತಿ ಹೆಚ್ಚು ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಂಡಿದ್ದು ನಮ್ಮ ತಾಲ್ಲೂಕು, ಇನ್ನೂ ಮುಂದೆ ಯಾವ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಬಾರದು ಎಂದು ಹೇಳಿದರು.
ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಂಗಮೇಶ ಸಗರ,ಕರವೇ ತಾಲ್ಲೂಕು ಅಧ್ಯಕ್ಷರಾದ ಮಹಾಂತೇಶ ಗಿಡ್ಡಪ್ಪಗೋಳ ಮತ್ತು ರವಿ ಗೊಳಸಂಗಿ,ಗ್ರಾ ಪಂ ಸದಸ್ಯ ಪ್ರದೀಪಗೌಡ ಪಾಟೀಲ ಹಾಗೂ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ ಎಸ್ ಎಂ ಮ್ಯಾಗೇರಿ, ಪಿಎ??? ಎಮ್ ಬಿ ಬಿರಾದಾರ ಉಪ ಕೃಷಿ ನಿರ್ದೇಶಕರು ಶರಣಗೌಡ ಮಾತನಾಡಿದರು.
ಈ ಸಂದರ್ಭದಲ್ಲಿ ಶಶಿಕಾಂತ ಬಿರಾದಾರ, ಮುದಕಪ್ಪ ಚಲವಾದಿ, ಶ್ರೀಶೈಲ ಬೆಣ್ಣೂರ, ಸುರೇಶ ಗಿಡ್ಡಪ್ಪಗೋಳ,ಗೋಪಾಲ ಕಾಖಂಡಕಿ, ಕಲ್ಲಪ್ಪ ಗಿಡ್ಡಪ್ಪಗೋಳ, ಬಸವರಾಜ ನ್ಯಾಮಗೊಂಡ,ಗುಳಪ್ಪ ಗುಗ್ಗರಿ,ಸತ್ಯಪ್ಪ ಕುಳೊಳ್ಳಿ ನೂರಾರು ರೈತರು ಹಾಗೂ ಕರವೇ ಕಾರ್ಯಕರ್ತರು ಪಾಲ್ಗೊಂಡಿದ್ದರು.


” ರೈತರಿಗೆ ಶೀಘ್ರ ಯೂರಿಯಾ ಗೊಬ್ಬರ ಒದಗಿಸಿಕೊಡುವುದು ಮತ್ತು ಬೆಳೆಹಾನಿ ಪರಿಹಾರಕ್ಕೆ ಆದೇಶ ಮಾಡುವುದು ಆಗಬೇಕು ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರ ಜವಾಬ್ದಾರಿ”

ಸೋಮು ಬಿರಾದಾರ
ಅಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ಕೊಲ್ಹಾರ.


“ಬಳೂತಿ ಗ್ರಾಮದ ಆಶ್ರಯ ಯೋಜನೆಯಲ್ಲಿ ನಿರ್ಮಾಣ ಮಾಡಿದ ಮನೆಯ ಮುಖ್ಯಸ್ಥರು ತಮ್ಮ ಮೂಲ ದಾಖಲೆಗಳನ್ನು ನೀಡಿದರೆ ತಕ್ಷಣ ಹಕ್ಕುಪತ್ರ ನೀಡುತ್ತೇವೆ “

ಸುನೀಲ ಮದ್ದಿನ
ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಕೊಲ್ಹಾರ.