
ಹಾನಗಲ್,ನ.೭: ಧರ್ಮ ಉಳಿಸಿ, ಮಾನವತೆ ಬೆಳೆಸುವಲ್ಲಿ ಪ್ರತಿಯೊಬ್ಬರೂ ಗಮನ ಹರಿಸಬೇಕಿದೆ. ಮಾನವನಲ್ಲಿ ಅದ್ಭುತ ಶಕ್ತಿ ಅಡಗಿದೆ. ಅದನ್ನು ಸರಿಯಾಗಿ ತಿಳಿದುಕೊಂಡು ಮೊದಲು ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕಿದೆ. ಅಂದಾಗ ಮಾತ್ರ ಸ್ವಾಸ್ಥö್ಯಪೂರ್ಣ ಸುಸಂಸ್ಕೃತ ಸಮಾಜ ನೆಲೆಯೂರಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ಉಪ್ಪುಣಸಿ ಗ್ರಾಮದಲ್ಲಿ ಮೈಲಾರಲಿಂಗೇಶ್ವರ ಶಿವಭಾರದ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ನಾನಾ ಧಾರ್ಮಿಕ ಮತ್ತು ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಅವರು ಮಾತನಾಡಿದರು ಎಂದರು.
ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಕೆಎಂಎಫ್ ನಿರ್ದೇಶಕ ಚಂದ್ರಪ್ಪ ಜಾಲಗಾರ, ಗ್ರಾಪಂ ಅಧ್ಯಕ್ಷ ಬಾಬಾಜಾನ್ ಬಂಕಾಪೂರ, ಬಗರ್ ಹುಕುಂ ಸಾಗುವಳಿ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಮುಖಂಡರಾದ ಭರಮಣ್ಣ ಶಿವೂರ, ಆದರ್ಶ ಶೆಟ್ಟಿ, ಚಿನ್ನಪ್ಪ ದೊಡ್ಡಚಿಕ್ಕಣ್ಣನವರ, ಕರಿಯಪ್ಪ ಗಂಟೇರ, ಫಕ್ಕೀರಪ್ಪ ಉಪಸ್ಥಿತರಿದ್ದರು.
























