
ಕಲಬುರಗಿ,ನ.19-ಲೈನ್ ಮ್ಯಾನ್ವೊಬ್ಬರು ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ.
ಪರಮೇಶ್ವರ್ ಆತ್ಮಹತ್ಯೆಗೆ ಶರಣಾದವರು.
ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳ ಕಾರಣ ಎಂದು ಪರಮೇಶ್ವರ್ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.































