
ಕಲಬುರಗಿ,ಜೂ.12-ಮೂರ್ಛೆರೋಗದಿಂದ ಬಳಲುತ್ತಿದ್ದ ಲೈನ್‍ಮನ್ ಒಬ್ಬರು ಮನಸ್ಸಿನ ಮೇಲೆ ಪರಿಣಾಮ ಮಾಡಿಕೊಂಡು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಾಣಿಕೇಶ್ವರಿ ಕಾಲೋನಿಯಲ್ಲಿ ನಡೆದಿದೆ.
ನಿಂಬರ್ಗಾ ವೃತ್ತದಲ್ಲಿ ಲೈನ್ ಮನ್ ಕೆಲಸ ಮಾಡುತ್ತಿದ್ದ ರಾಜಶೇಖರ್ ದಣ್ಣೂರ್ ಆತ್ಮಹತ್ಯೆ ಮಾಡಿಕೊಂಡವರು.
ಮೂರ್ಛೆರೋಗದಿಂದ ಬಳಲುತ್ತಿದ್ದ ರಾeಶೇಖರ್ ಅವರು ಅದರಿಂದ ಮನಸ್ಸಿನ ಮೇಲೆ ಪರಿಣಾಮ ಮಾಡಿಕೊಂಡು ಮನೆಯಲ್ಲಿ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ರಾಜಶೇಖರ್ ಅವರ ಪತ್ನಿ ಪೂಜಾ ಅವರು ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ತನಿಖೆ ನಡೆದಿದೆ.






















