
ಕಲಬುರಗಿ, ಅ. ೧೮- ಕಲ್ಬುರ್ಗಿ ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸದ್ಯ ಗ್ಯಾರಂಟಿಯಿಂದ ಸಾಲಮನ್ನಾ ಮಾಡಲು ಆಗಲ್ಲ. ಆದರೆ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಏನು ಸಹಾಯ ಮಾಡಬೇಕು ಆ ಸಹಾಯ ನಾವು ಮಾಡುತ್ತೇವೆ ಎಂದರು.
ತಿರುಕನ ಕನಸು ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುತ್ತಾರೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ವಿಜಯೇಂದ್ರ ಅವರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ತಿರುಗೇಟು ನೀಡಿದರು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಹಾಗಾಗ ತಿರುಕನ ಕನಸು ಬೀಳುತ್ತಿರುತ್ತದೆ. ಕಾಂಗ್ರೆಸ್ನಿಂದ ೨೫ ಶಾಸಕರು ಬೇರೆ ಪಕ್ಷಕ್ಕೆ ಬರುತ್ತಾರೆ ಎಂದು ಹೇಳುತ್ತಿರುವುದು ಇದೇ ರೀತಿಯ ಕನಸು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ವ್ಯಂಗ್ಯವಾಡಿದರು.
ಸಿಜೆಪಿಗೆ ಕಾಂಗ್ರೆಸ್ನಿಂದ ಹಣಕಾಸಿನ ನೆರವು ನೀಡಲಾಗುತ್ತಿದೆ ಎಂಬ ಬಿಜೆಪಿಯ ರಾಜ್ಯಾಧ್ಯಕ್ಷ ವಿಜೇಂದ್ರ ಆರೋಪವನ್ನ ತಳ್ಳಿ ಹಾಕಿದ ಅವರು ಫಂಡಿಂಗ್ ಪಡೆಯುವುದು ಹಾಗೂ ಆರ್ಟಿಜಿಎಸ್ ಮೂಲಕ ಲಂಚ ಪಡೆಯುವ ವಿಚಾರಗಳ ಬಗ್ಗೆ ವಿಜಯೇಂದ್ರ ಅವರಿಗೆ ಚೆನ್ನಾಗಿ ತಿಳಿದಿದೆ.ಯುವಕರು ಜೈಲಿಗೆ ಹೋದರೆ ಅವರಿಗೆ ಕಾನೂನು ನೆರವು ನೀಡುತ್ತೇವೆ ಎಂದು ಹೇಳಿದ್ದೇವೆ. ಅದನ್ನು ಫಂಡಿಂಗ್ ಎಂದು ಕರೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಕುರಿತ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ಎಚ್.ಡಿ. ಕುಮಾರಸ್ವಾಮಿಗೆ ಸ್ಯಾಟಲೈಟ್ ಮೂಲಕ ವಿಷಯ ತಿಳಿಯುತ್ತದೆಯೇ ಎಂದು ಪ್ರಶ್ನಿಸಿದರು.
ರಾಜಕೀಯ ನಾಯಕರು ಪರಸ್ಪರ ಭೇಟಿಯಾಗುವುದು ಸಾಮಾನ್ಯ. ಆದರೆ ಶಾಸಕರು ಮತ್ತು ಸಂಸದರ ವೈಯಕ್ತಿಕ ವಿಚಾರಗಳ ಬಗ್ಗೆ ತಾನು ಚರ್ಚಿಸುವುದಿಲ್ಲ ಎಂದು ಹೇಳಿದರು.























