
ಜಮಖಂಡಿ | ಜು 28: ನಗರದ ತಾಲೂಕು ಉಪ ಖಜಾನೆ ಕಾರ್ಯಾಲಯದ ಮೇಲೆ ಸೋಮವಾರ ಲೋಕಾಯುಕ್ತ ಪೆÇಲೀಸರು ದಾಳಿ ನಡೆಸಿ, ?40 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ತಾಲೂಕು ಖಜಾನೆ ಅಧಿಕಾರಿ ಎಸ್.ಎಸ್. ಬಿರಾದಾರ ಹಾಗೂ ಪ್ರಥಮ ದರ್ಜೆ ಸಹಾಯಕ ವಿನಾಯಕ ಹೊನವಾಡ ಅವರನ್ನು ರೆಡ್‍ಹ್ಯಾಂಡ್ ಆಗಿ ಬಲೆಗೆ ಬೀಳಿಸಿದ್ದಾರೆ.
ಬಾಗಲಕೋಟೆ ಲೋಕಾಯುಕ್ತ ಪೆÇಲೀಸ್ ಠಾಣೆಗೆ ಜಮಖಂಡಿಯ ಚೇತನ್ ತರತರಿ ಅವರು ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ.
ದೂರಿನ ಪ್ರಕಾರ, ದೂರುದಾರರ ಮಾವ ಕಾರ್ಮಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಅವರ ?1.42 ಲಕ್ಷ ನಿವೃತ್ತಿ ಪಿಂಚಣಿ ಹಾಗೂ ಇತರೆ ನಿವೃತ್ತಿ ಸೌಲಭ್ಯಗಳ ಹಣ ಬಿಡುಗಡೆ ಮಾಡಲು ಆರಂಭದಲ್ಲಿ ?70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಮಾತುಕತೆಯ ಮೂಲಕ ?40 ಸಾವಿರಕ್ಕೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ, ?40 ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳನ್ನು ರೆಡ್‍ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಹಾಗೂ ಹಣದ ವ್ಯವಹಾರಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳೂ ಲೋಕಾಯುಕ್ತ ಅಧಿಕಾರಿಗಳಿಗೆ ಲಭ್ಯವಾಗಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ (Pಡಿeveಟಿಣioಟಿ oಜಿ ಅoಡಿಡಿuಠಿಣioಟಿ ಂಛಿಣ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಾಗಲಕೋಟೆ ಲೋಕಾಯುಕ್ತ ಎಸ್‍ಪಿ ಮಹಾಂತೇಶ ನಂದಗಾಂವಿ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಲೋಕಾಯುಕ್ತ ಎಸ್.ಪಿ ಮನವಿ
ಯಾವುದೇ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟರೆ ತಕ್ಷಣವೇ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸಿ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಸರ್ಕಾರಿ ಯೋಜನೆಗಳಲ್ಲಿ ಅಥವಾ ಸಾರ್ವಜನಿಕ ಹಣದ ದುರುಪಯೋಗಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೂ ಲೋಕಾಯುಕ್ತ ಕಚೇರಿಗೆ ಸಲ್ಲಿಸಿ ತನಿಖೆಗೆ ಸಹಕರಿಸುವಂತೆ ಕೋರಿದ್ದಾರೆ.
ಈ ಕಾರ್ಯಾಚರಣೆಯನ್ನು ಬಾಗಲಕೋಟೆ ಲೋಕಾಯುಕ್ತ ಎಸ್‍ಪಿ ಮಹಾಂತೇಶ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‍ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ, ಸಿಪಿಐ ಎನ್.ಆರ್. ಖಿಲಾರೆ, ಸಿಪಿಐ ಮಲ್ಲಿಕಾರ್ಜುನ ಬಿರಾದಾರ ಹಾಗೂ ಲೋಕಾಯುಕ್ತ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದರು.





























