
ಬೆಂಗಳೂರು,ಜು.೭-ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವ್ಯವಸ್ಥಾಪಕ ನಿರ್ದೇಶಕ(ಎಂಡಿ) ಜಗದೀಶ್ ಅವರ ಕಚೇರಿ ಮನೆ ಸೇರಿ,೭ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಜಗದೀಶ್ ಅವರ ಕಾವೇರಿ ಭವನದ ಕಚೇರಿ,ನಾಲ್ಕು ಮನೆಗಳು,ಯಲಹಂಕ, ದೇವನಹಳ್ಳಿ ತಹಶೀಲ್ದಾರ್ ಕಚೇರಿ ಸೇರಿ ೭ ಕಡೆಗಳಲ್ಲಿ ದಾಳಿ ನಡೆಸಿ ಶೋಧ ಕೈಗೊಳ್ಳಲಾಗಿದೆ.
ಹಿಂದೆ ನಗರದಲ್ಲಿ ವಿಶೇಷ ಜಿಲ್ಲಾಧಿಕಾರಿಯಾಗಿದ್ದ ಜಗದೀಶ್ ಯಲಹಂಕದಲ್ಲಿ ಅನಧಿಕೃತ ವ್ಯಕ್ತಿಗಳಿಗೆ ಜಮೀನು ನೀಡಿದ್ದ ಆರೋಪ ಕೇಳಿಬಂದಿತ್ತು.
೨೦೨೩ ರಲ್ಲಿ ೯ ಹಾಗೂ ೨ ಜಮೀನನ್ನು ಅನಧಿಕೃತವಾಗಿ ನೀಡಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಗದೀಶ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಯಲಹಂಕ ಭಾಗದ ೯ ಎಕರೆ ಹಾಗೂ ೨ ಎಕರೆ ಖಾಸಗಿಯವರಿಗೆ ಪರಭಾರೆ ಮಾಡಿರುವ ಸಂಬಂಧ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿದೆ.






























