
ಕಲಬುರಗಿ,ಸೆ 22: ಜೆಸ್ಕಾಂ ಎಇಇ ರಾಜೇಶ್ವರಿ ಅವರ ಎರಡು ಮನೆ ಹಾಗೂ ಕಛೇರಿ ಮೇಲೆ ಇಂದು ಬೆಳಿಗ್ಗೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‍ನಲ್ಲಿರುವ ಮನೆ,ಖಾದ್ರಿ ಚೌಕ್‍ನಲ್ಲಿಯ ಇನ್ನೊಂದು ಮನೆ ಹಾಗೂ ಕಲಬುರಗಿಯ ಅವರ ಜೆಸ್ಕಾಂ ಕಛೇರಿಯ ಮೇಲೂ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ.
ಬೆಳಿಗ್ಗೆ ವಾಕಿಂಗ್ ಹೋಗಿದ್ದ ಅಧಿಕಾರಿ ಮನೆಗೆ ಬರುವುದರೊಳಗೆ ಲೋಕಾಯುಕ್ತರು ದಾಳಿ ನಡೆಸಿ ಶಾಕ್ ನೀಡಿದ್ದಾರೆ.























