
ವಿಜಯಪುರ, ನ. 27: ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹುಚ್ಚಪ್ಪ ಶಿಂಗೆಗೋಳ ಅವರಿಗೆ ಸಂಬಂಧಿಸಿದ ನಿವಾಸಗಳು, ಕಚೇರಿ ಹಾಗೂ ತೋಟದ ಮನೆಯ ಮೇಲೆ ವಿಜಯಪುರ ಜಿಲ್ಲಾ ಲೋಕಾಯುಕ್ತ ಪೆÇಲೀಸರು ಏಕಕಾಲಕ್ಕೆ ದಾಳಿ ನಡೆಸಿ ವಿವಿಧ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ವಿಜಯಪುರ ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ, ಚಾಲುಕ್ಯ ನಗರದ ನಿವಾಸ, ಹಿಟ್ನಳ್ಳಿಯ ಜಿಲ್ಲಾ ತರಬೇತಿ ಕೇಂದ್ರದಲ್ಲಿರುವ ಕಚೇರಿ ಹಾಗೂ ದೇವರಹಿಪ್ಪರಗಿ ತಾಲೂಕಿನ ಪಡಗಾನೂರು ಗ್ರಾಮದ ತೋಟದ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಾಲ್ಕು ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಆಸ್ತಿ ವಿವರಗಳು, ವಿವಿಧ ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿಯನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ.
ವಿಜಯಪುರ ಲೋಕಾಯುಕ್ತ ಪೆÇಲೀಸ್ ವರಿಷ್ಠಾಧಿಕಾರಿ ಮಹಾನಿಂಗರಾಯ ನಂದಗಾವಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಆನಂದ ಟಕ್ಕಣ್ಣವರ ನೇತೃತ್ವದಲ್ಲಿ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸದ್ಯ ನಾಲ್ಕೂ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಲೋಕಾಯುಕ್ತ ಅಧಿಕಾರಿಗಳ ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.



















